ಪುಣೆ: ಪುಣೆ ಜಿಲ್ಲೆಯ ಪಿಂಪ್ರಿ-ಚಿಂಚ್‌ವಾಡ್ ಪ್ರದೇಶದಲ್ಲಿರುವ ಮೇಣದ ಬತ್ತಿ ತಯಾರಿಕಾ ಘಟಕದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಕನಿಷ್ಠ 6 ಕಾರ್ಮಿಕರು ಮೃತಪಟ್ಟಿದ್ದು, 8 ಮಂದಿ ಗಾಯಗೊಂಡಿದ್ದಾರೆ.
ಶುಕ್ರವಾರ ಮಧ್ಯಾಹ್ನ 2.45 ರ ಸುಮಾರಿಗೆ ತಲವಾಡೆಯಲ್ಲಿರುವ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿರುವ ಬಗ್ಗೆ ಅಗ್ನಿಶಾಮಕ ದಳಕ್ಕೆ ಮಾಹಿತಿ ಬಂದಿದೆ' ಎಂದು ಪಿಂಪ್ರಿ-ಚಿಂಚ್‌ವಡ ಪುರಸಭೆಯ ಆಯುಕ್ತ ಶೇಖರ್ ಸಿಂಗ್ ತಿಳಿಸಿದ್ದಾರೆ.
ಕಾರ್ಖಾನೆಯಲ್ಲಿ ಹುಟ್ಟುಹಬ್ಬದ ಆಚರಣೆಗೆ ಬಳಸಲಾಗುವ ಮೇಣದ ಬತ್ತಿಗಳನ್ನು ತಯಾರಿಸಲಾಗುತ್ತದೆ. ಸದ್ಯ ಬೆಂಕಿಯನ್ನು ಹತೋಟಿಗೆ ತರಲಾಗಿದೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಗಾಯಾಳುಗಳನ್ನು ಪುಣೆ ಮತ್ತು ಪಿಂಪ್ರಿ-ಚಿಂಚ್‌ವಾಡ್ ಮುನ್ಸಿಪಲ್ ಕಾರ್ಪೊರೇಷನ್ ಪ್ರದೇಶದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಸಿಂಗ್ ಮಾಹಿತಿ ನೀಡಿದ್ದಾರೆ.