HEALTH TIPS

8 ಭಾರತೀಯರ ಮರಣ ದಂಡನೆ ಶಿಕ್ಷೆಯನ್ನು ತಗ್ಗಿಸಿದ ಕತಾರ್ ನ್ಯಾಯಾಲಯ

             ವದೆಹಲಿ: ಕತಾರ್‌ನಲ್ಲಿ ಮರಣ ದಂಡನೆ ಶಿಕ್ಷೆಗೆ ಗುರಿಯಾಗಿರುವ ಭಾರತೀಯ ನೌಕಾಪಡೆಯ ಎಂಟು ಮಾಜಿ ಅಧಿಕಾರಿಗಳ ಶಿಕ್ಷೆಯನ್ನು ಕತಾರ್ ನ್ಯಾಯಾಲಯವು ತಗ್ಗಿಸಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ(ಎಂಇಎ) ತಿಳಿಸಿದೆ.

             'ದಹ್ರಾ ಗ್ಲೋಬಲ್ ಪ್ರಕರಣದಲ್ಲಿ ಭಾರತದ ಮೇಲ್ಮನವಿಗೆ ಸಂಬಂಧಿಸಿದಂತೆ ಕತಾರ್‌ನ ನ್ಯಾಯಾಲಯವು ಇಂದು ತೀರ್ಪು ನೀಡಿದ್ದು, ಶಿಕ್ಷೆಯನ್ನು ಕಡಿಮೆ ಮಾಡಲಾಗಿದೆ' ಎಂದು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

            ಆದರೆ, ಶಿಕ್ಷೆಯ ಮಾರ್ಪಾಡು ಕುರಿತಾದ ಹೆಚ್ಚಿನ ಮಾಹಿತಿ ಇನ್ನಷ್ಟೆ ಬರಬೇಕಿದೆ.

ಬೇಹುಗಾರಿಕೆ ಆರೋಪದಡಿ ಭಾರತ ಮೂಲದ ನೌಕಾಪಡೆಯ 8 ಮಾಜಿ ಅಧಿಕಾರಿಗಳನ್ನು ಬಂಧಿಸಿ ಅವರಿಗೆ ಮರಣ ದಂಡನೆ ವಿಧಿಸಲಾಗಿತ್ತು.

             ದೋಹಾ ಮೂಲದ ದಹ್ರಾ ಗ್ಲೋಬಲ್ ಕಂಪನಿಯ ನೌಕರರಾಗಿದ್ದ ಭಾರತೀಯರನ್ನು ಆಗಸ್ಟ್ 2022ರಲ್ಲಿ ವಶಕ್ಕೆ ಪಡೆಯಲಾಗಿತ್ತು. ಅವರ ಮೇಲಿನ ಆರೋಪಗಳು ಏನು ಎಂಬುದನ್ನು ಕತಾರ್ ಅಧಿಕಾರಿಗಳು ಬಹಿರಂಗಪಡಿಸಿಲ್ಲ.

              ಮರಣ ದಂಡನೆ ಶಿಕ್ಷೆ ಪ್ರಶ್ನಿಸಿ ಕಳೆದ ತಿಂಗಳು ಭಾರತ ಸರ್ಕಾರವು ಕತಾರ್ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿತ್ತು.

                 'ತೀರ್ಪು ಪ್ರಕಟಿಸುವ ವೇಳೆ ಶಿಕ್ಷೆಗೀಡಾಗಿರುವ ಮಾಜಿ ಅಧಿಕಾರಿಗಳ ಕುಟುಂಬ ಸದಸ್ಯರ ಜೊತೆ ನಮ್ಮ ರಾಜತಾಂತ್ರಿಕರು ಮತ್ತು ಇತರೆ ಅಧಿಕಾರಿಗಳು ನ್ಯಾಯಾಲಯದಲ್ಲಿ ಹಾಜರಿದ್ದರು. ಈ ವಿಷಯದಲ್ಲಿ ನಾವು ಮೊದಲಿನಿಂದಲೂ ಅವರ ಪರ ನಿಂತಿದ್ದೇವೆ. ನಮ್ಮ ರಾಜತಾಂತ್ರಿಕ ಮತ್ತು ಕಾನೂನು ನೆರವನ್ನು ಮುಂದುವರಿಸುತ್ತೇವೆ' ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

              ತೀರ್ಪಿನ ಸಂಪೂರ್ಣ ಮಾಹಿತಿಗಾಗಿ ಕಾಯುತ್ತಿದ್ದೇವೆ. ಮುಂದಿನ ನಿರ್ಧಾರ ಕೈಗೊಳ್ಳುವ ಕುರಿತಂತೆ ಚರ್ಚಿಸಲು ಕಾನೂನು ತಂಡ ಮತ್ತು ಶಿಕ್ಷೆಗೊಳಗಾದವರ ಕುಟುಂಬದ ಜೊತೆ ನಿಕಟ ಸಂಪರ್ಕದಲ್ಲಿದ್ದೇವೆ ಎಂದೂ ತಿಳಿಸಲಾಗಿದೆ.

                'ಈ ಪ್ರಕ್ರಿಯೆಯು ಅತ್ಯಂತ ಸೂಕ್ಷ್ಮ ಮತ್ತು ಗೋಪ್ಯತೆಯಿಂದ ಕೂಡಿದ್ದಾಗಿರುವುದರಿಂದ ಈ ಬಗ್ಗೆ ಹೆಚ್ಚಿನ ಮಾಹಿತಿ ಬಹಿರಂಗಪಡಿಸಲು ಸಾಧ್ಯವಿಲ್ಲ' ಎಂದು ಎಂಇಎ ತಿಳಿಸಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries