ನವದೆಹಲಿ: ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸಗಢದಲ್ಲಿ ಬಿಜೆಪಿ ಗೆಲುವಿನ ನಗೆ ಬೀರಿದೆ. ಉತ್ತಮ ಆಡಳಿತ ಮತ್ತು ಅಭಿವೃದ್ಧಿಗಾಗಿ ಬಿಜೆಪಿಯೊಂದಿಗೆ ಜನರು ದೃಢವಾಗಿದ್ದಾರೆ ಎಂದು ಸೂಚಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ನವದೆಹಲಿ: ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸಗಢದಲ್ಲಿ ಬಿಜೆಪಿ ಗೆಲುವಿನ ನಗೆ ಬೀರಿದೆ. ಉತ್ತಮ ಆಡಳಿತ ಮತ್ತು ಅಭಿವೃದ್ಧಿಗಾಗಿ ಬಿಜೆಪಿಯೊಂದಿಗೆ ಜನರು ದೃಢವಾಗಿದ್ದಾರೆ ಎಂದು ಸೂಚಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ತೆಲಂಗಾಣದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ್ದು, ಬಿಜೆಪಿ 8 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಈ ಕುರಿತು ಎಕ್ಸ್‌ನಲ್ಲಿ, 'ತೆಲಂಗಾಣದ ಪ್ರೀತಿಯ ಸಹೋದರ ಸಹೋದರಿಯರೆ, ಬಿಜೆಪಿಗೆ ಬೆಂಬಲ ನೀಡಿದ್ದಕ್ಕೆ ಧನ್ಯವಾದಗಳು. ತೆಲಂಗಾಣದೊಂದಿಗಿನ ನಮ್ಮ ಬಂಧ ದೂರಮಾಡಲಾಗದು. ನಮ್ಮ ಕೆಲಸವನ್ನು ನಾವು ಮುಂದುವರಿಸುತ್ತೇವೆ ಎಂದು ಬರೆದಿದ್ದಾರೆ.