ಎರ್ನಾಕುಳಂ: ಪೋಲೀಸ್ ಅಧಿಕಾರಿಯೋರ್ವರು ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಕರಿಂಗಾತುರುತ್ ಮೂಲದ ಶಿಬು ಭಾನುವಾರ ಬೆಳಗ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಇವರು ಅಂಜರಾಯಕಲ್ ಪೋಲೀಸ್ ಠಾಣೆಯ ಎಸ್‍ಐ ಗ್ರೇಡ್ ಅಧಿಕಾರಿ.
ಯಕೃತ್ತಿನ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬಹಳ ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ನಿನ್ನೆಯೂ ಶಿಬು ಬಹಳ ಹೊತ್ತು ಮದ್ಯ ಸೇವಿಸಿದ್ದರು ಎನ್ನಲಾಗಿದೆ. ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮೃತದೇಹವನ್ನು ಉತ್ತರ ಪರವೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಿ ಶವಾಗಾರದಲ್ಲಿ ಇರಿಸಲಾಗಿದೆ.