ಕೋಲ್ಕತ್ತಾ: ಪ್ರಾಸ್ಟೇಟ್ ಕ್ಯಾನ್ಸರ್ ನಿಂದ ಬಳಲುತ್ತಿರುವ ಸಂಗೀತ ಮಾಂತ್ರಿಕ ಉಸ್ತಾದ್ ರಶೀದ್ ಖಾನ್ ಅವರು ಕೋಲ್ಕತ್ತಾದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಶನಿವಾರ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
55 ವರ್ಷದ ಖಾನ್ ಅವರನ್ನು ವೆಂಟಿಲೇಶನ್‌ನಲ್ಲಿ ಇರಿಸಲಾಗಿದೆ ಎಂದು ಅವರು ಹೇಳಿದ್ದಾರೆ.
"ಆರಂಭದಲ್ಲಿ, ಅವರು ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದರು. ಆದರೆ ಸೆರೆಬ್ರಲ್ ಅಟ್ಯಾಕ್ ನಂತರ, ಅವರ ಸ್ಥಿತಿ ಹದಗೆಡಲು ಪ್ರಾರಂಭಿಸಿತು. ಅವರ ಸ್ಥಿತಿ ಈಗ ಗಂಭೀರವಾಗಿದ್ದು, ವೆಂಟಿಲೇಟರ್‌ನಲ್ಲಿ ಇರಿಸಲಾಗಿದೆ. ನಮ್ಮ ವೈದ್ಯರು ಅವರ ಆರೋಗ್ಯದ ಮೇಲೆ ನಿರಂತರ ನಿಗಾ ಇರಿಸಿದ್ದಾರೆ" ಎಂದು ಅಧಿಕಾರಿ ತಿಳಿಸಿದ್ದಾರೆ.
ರಶೀದ್ ಖಾನ್ ಅವರಿಗೆ 2006ರಲ್ಲಿ ಪದ್ಮಶ್ರೀ ಪ್ರಶಸ್ತಿ ಮತ್ತು 2012ರಲ್ಲಿ ಬಂಗಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. 2022ರಲ್ಲಿ ಅವರಿಗೆ ಪದ್ಮಭೂಷಣ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.