ಲಖನೌ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಶನಿವಾರ) ಅಯೋಧ್ಯೆಯಲ್ಲಿ ಮಹರ್ಷಿ ವಾಲ್ಮೀಕಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಉದ್ಘಾಟಿಸಿದರು.
ಲಖನೌ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಶನಿವಾರ) ಅಯೋಧ್ಯೆಯಲ್ಲಿ ಮಹರ್ಷಿ ವಾಲ್ಮೀಕಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಉದ್ಘಾಟಿಸಿದರು.
ವಿಮಾನ ನಿಲ್ದಾಣದ ಮೊದಲ ಹಂತವನ್ನು ₹1450 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ. ವಿಮಾನ ನಿಲ್ದಾಣದ ಟರ್ಮಿನಲ್ ಕಟ್ಟಡವು 6,500 ಚದರ ಮೀಟರ್ ವಿಸ್ತೀರ್ಣವನ್ನು ಹೊಂದಿದ್ದು, ವಾರ್ಷಿಕವಾಗಿ ಸುಮಾರು 10 ಲಕ್ಷ ಪ್ರಯಾಣಿಕರಿಗೆ ಸೇವೆ ಒದಗಿಸಲಿದೆ.
ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಮತ್ತು ರಾಜ್ಯಪಾಲೆ ಆನಂದಿಬೆನ್ ಪಟೇಲ್ ಸೇರಿದಂತೆ ಗಣ್ಯರು ವಿಮಾನ ನಿಲ್ದಾಣ ಉದ್ಘಾಟನೆ ವೇಳೆ ಉಪಸ್ಥಿತರಿದ್ದರು.