ಕಾಸರಗೋಡು: ಜಲಸಂರಕ್ಷಣಾ ಕ್ಷೇತ್ರದಲ್ಲಿನ ಚಟುವಟಿಕೆ ಪೆÇ್ರೀತ್ಸಾಹಿಸಲು ಕೇಂದ್ರ ಜಲಶಕ್ತಿ ಸಚಿವಾಲಯವು 5ನೇ ರಾಷ್ಟ್ರೀಯ ಜಲ ಪ್ರಶಸ್ತಿಯನ್ನು ನೀಡುತ್ತಿದೆ. ಗ್ರಾಮ ಪಂಚಾಯಿತಿ, ನಗರ ಸ್ಥಳೀಯಾಡಳಿತ ಸಂಸ್ಥೆಗಳು, ಕಾಪೆರ್Çರೇಟ್ ವಲಯ ಮತ್ತು ನಾಗರಿಕ ಸಮಾಜ ಸಂಸ್ಥೆಗಳು ಸೇರಿದಂತೆ ವಲಯದಲ್ಲಿ ಕೆಲಸ ಮಾಡುವ ವ್ಯಕ್ತಿಗಳು ಆನ್‍ಲೈನ್‍ನಲ್ಲಿ ನಮೂದುಗಳನ್ನು ಕಳುಹಿಸಬಹುದಾಗಿದೆ. ಜಲ ಶಕ್ತಿ ಇಲಾಖೆಯ ವೆಬ್‍ಸೈಟ್‍ನಲ್ಲಿ ಹೆಚ್ಚಿನ ಮಾಹಿತಿ ಲಭ್ಯವಿದ್ದು, ಅರ್ಜಿ ಸಲ್ಲಿಕೆಗೆ ಡಿ. 15 ಕೊನೆಯ ದಿನಾಂಕವಾಗಿರುತ್ತದೆ ಎಂದು ಪ್ರಕಟಣೆ ತಿಳಿಸಿದೆ.