ಬದಿಯಡ್ಕ: ಚಿಂತಕ, ಪ್ರಖರ ವಾಗ್ಮಿ, ಶಬರಿಮಲೆ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ವಿಶ್ವಹಿಂದೂ ಪರಿಷತ್ ರಾಜ್ಯ ಪ್ರಮುಖರಾದ ವೇದಮೂರ್ತಿ ವಿದ್ಯಾಸಾಗರ ಗುರುಮೂರ್ತಿ ಕಲ್ಲಿಕೋಟೆ ಅವರು ಮವ್ವಾರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ಪ್ರಸಾದವನ್ನು ಸ್ವೀಕರಿಸಿದರು. ವಿವಿಧ ಕಾರ್ಯಕ್ರಮಗಳಿಗಾಗಿ ಅವರು ಜಿಲ್ಲೆಗೆ ಆಗಮಿಸಿದ್ದರು. ಮವ್ವಾರು ಕ್ಷೇತ್ರದ ಬ್ರಹ್ಮಕಲಶೋತ್ಸವವು ನಡೆಯುತ್ತಿದ್ದು, ಸಮಿತಿಯ ಪದಾಧಿಕಾರಿಗಳು ಅವರನ್ನು ಶಾಲು ಹೊದೆಸಿ ಗೌರವಿಸಿದರು. ಇದೇ ಸಂದರ್ಭದಲ್ಲಿ ಅಯ್ಯಪ್ಪ ವ್ರತಧಾರಿಗಳೊಂದಿಗೆ ಅವರು ಮಾತನಾಡಿದರು.