ನವದೆಹಲಿ: 'ಸಂಸತ್ತಿನಲ್ಲಿ ಭದ್ರತಾ ಲೋಪ ಏಕೆ ಸಂಭವಿಸಿತು ಎಂದು ಅವಲೋಕಿಸಿದರೆ, ದೇಶದ ಇಂದಿನ ಪ್ರಮುಖ ಸಮಸ್ಯೆಯೇ ನಿರುದ್ಯೋಗ. ಹಣದುಬ್ಬರ ಮತ್ತು ನಿರುದ್ಯೋಗದಿಂದ ಹತಾಶರಾಗಿರುವ ಯುವಕರು ಈ ಕೆಲಸ ಮಾಡಿದ್ದಾರೆ' ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಭದ್ರತಾ ಲೋಪದ ಬಗ್ಗೆ ಇದೇ ಮೊದಲ ಬಾರಿಗೆ ಹೇಳಿಕೆ ನೀಡಿರುವ ಅವರು, 'ಪ್ರಧಾನ ಮಂತ್ರಿಯವರ ನೀತಿಯಿಂದ ದೇಶದಲ್ಲಿ ಯುವಕರಿಗೆ ಉದ್ಯೋಗ ಸಿಗುತ್ತಿಲ್ಲ' ಎಂದು ಆರೋಪಿಸಿದ್ದಾರೆ.
ಡಿಸೆಂಬರ್ 13ರಂದು ಕಲಾಪ ನಡೆಯುತ್ತಿರುವಾಗ ಇಬ್ಬರು ಯುವಕರು ಸಂದರ್ಶಕರ ಗ್ಯಾಲರಿಯಿಂದ ಸದನದೊಳಗೆ ಜಿಗಿದು ಘೋಷಣೆಗಳನ್ನು ಕೂಗುತ್ತಾ 'ಸ್ಮೋಕ್ ಕ್ಯಾನ್' ಹಾರಿಸಿ ದಾಂಧಲೆ ಎಬ್ಬಿಸಿದ್ದರು. ಇದರಿಂದಾಗಿ, ಸದನದಲ್ಲಿ ಆತಂಕ ಸೃಷ್ಟಿಯಾಗಿತ್ತು. ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಮುಖ ಆರೋಪಿ ಲಲಿತ್ ಮೋಹನ್ ಝಾ ಸೇರಿ ಒಟ್ಟು 6 ಜನರನ್ನು ಬಂಧಿಸಲಾಗಿದೆ.
ಆರೋಪಿಗಳಲ್ಲಿ ಹೆಚ್ಚಿನವರು ಉನ್ನತ ಶಿಕ್ಷಣ ಪಡೆದಿದ್ದು, ಮಣಿಪುರ ಹಿಂಸಾಚಾರ, ನಿರುದ್ಯೋಗ ಇವುಗಳಿಂದ ಬೇಸತ್ತು ಈ ಕೆಲಸ ಮಾಡಿರುವುದಾಗಿ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾರೆ.