ಚಂಡೀಗಢ: ದೇಶದಲ್ಲಿ ದಿನದಿಂದ ದಿನಕ್ಕೆ ಚಳಿ ಏರಿಕೆಯಾಗುತ್ತಿದೆ. ಪಂಜಾಬ್, ಹರಿಯಾಣ ಮತ್ತು ಒಡಿಶಾ ರಾಜ್ಯಗಳಲ್ಲಿ ತಾಪಮಾನ ಕನಿಷ್ಠ ಮಟ್ಟಕ್ಕೆ ಕುಸಿದಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ವರದಿ ತಿಳಿಸಿದೆ.
ಚಂಡೀಗಢ: ದೇಶದಲ್ಲಿ ದಿನದಿಂದ ದಿನಕ್ಕೆ ಚಳಿ ಏರಿಕೆಯಾಗುತ್ತಿದೆ. ಪಂಜಾಬ್, ಹರಿಯಾಣ ಮತ್ತು ಒಡಿಶಾ ರಾಜ್ಯಗಳಲ್ಲಿ ತಾಪಮಾನ ಕನಿಷ್ಠ ಮಟ್ಟಕ್ಕೆ ಕುಸಿದಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ವರದಿ ತಿಳಿಸಿದೆ.
ಪಂಜಾಬ್‌ನ ಅಮೃತಸರದಲ್ಲಿ ಕನಿಷ್ಠ 5.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದರೆ, ಫರೀದ್‌ಕೋಟ್ ಮತ್ತು ಬಟಿಂಡಾದಲ್ಲಿ ಕನಿಷ್ಠ ತಾಪಮಾನ 6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಪಾದರಸದ ಮಟ್ಟ ಪಟಿಯಾಲದಲ್ಲಿ 6.7 ಡಿಗ್ರಿ ಸೆಲ್ಸಿಯಸ್ ಮತ್ತು ಲುಧಿಯಾನದಲ್ಲಿ 7.1 ಡಿಗ್ರಿ ಸೆಲ್ಸಿಯಸ್‌ನಲ್ಲಿ ನೆಲೆಸಿದೆ.
ಉಭಯ ರಾಜ್ಯಗಳ ರಾಜಧಾನಿಯಾಗಿರುವ ಚಂಡೀಗಢದಲ್ಲಿ ಕನಿಷ್ಠ ತಾಪಮಾನ 6.2 ಡಿಗ್ರಿ ಸೆಲ್ಸಿಯಸ್‌ಗೆ ಇಳಿದಿದೆ.
ಒಡಿಶಾದಲ್ಲಿ ತಾಪಮಾನದ ಮಟ್ಟ ಕುಸಿದಿದ್ದು, 11 ಸ್ಥಳಗಳಲ್ಲಿ ಪಾದರಸವು 10 ಡಿಗ್ರಿ ಸೆಲ್ಸಿಯಸ್ ಮಾರ್ಕ್‌ಗಿಂತ ಕೆಳಗೆ ಇಳಿದಿದೆ.
ಕಂಧಮಾಲ್ ಜಿಲ್ಲೆಯ ಫುಲ್ಬಾನಿ ಒಡಿಶಾದ ಅತ್ಯಂತ ತಂಪಾದ ಸ್ಥಳವಾಗಿದ್ದು, ಕನಿಷ್ಠ 8 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.