ಭೋಪಾಲ್: ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಮಧ್ಯಪ್ರದೇಶದಲ್ಲಿ ಕಳಪೆ ಸಾಧನೆ ತೋರಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಕಮಲ್ ನಾಥ್ ಅವರನ್ನು ವಜಾಗೊಳಿಸಲಾಗಿದೆ.
ಮಧ್ಯಪ್ರದೇಶದ ಕಾಂಗ್ರೆಸ್ ನ ನೂತನ ಅಧ್ಯಕ್ಷರನ್ನಾಗಿ ಜಿತು ಪಟ್ವಾರಿ ಅವರನ್ನು ನೇಮಕ ಮಾಡಲಾಗಿದೆ. ಚುನಾವಣೆಯ ಫಲಿತಾಂಶದ ಬಳಿಕ ಕಮಲ್ ನಾಥ್ ಅವರಿಗೆ ಸೂಚನೆ ನೀಡಲಾಗಿತ್ತು ಎಂದು ಮೂಲಗಳು ತಿಳಿಸಿವೆ. ನಿರ್ಗಮಿತ ಪಿಸಿಸಿ ಅಧ್ಯಕ್ಷ ಕಮಲ್ ನಾಥ್ ಅವರ ಕೊಡುಗೆಗಳನ್ನು ಪಕ್ಷವು ಪ್ರಶಂಸಿಸುತ್ತದೆ ಎಂದು ಕಾಂಗ್ರೆಸ್ ಹೇಳಿದೆ.
ಉಮಂಗ್ ಸಿಂಘರ್ ಅವರನ್ನು ಸಿಎಲ್‌ಪಿ ನಾಯಕರನ್ನಾಗಿ ಮತ್ತು ಹೇಮಂತ್ ಕಟಾರೆ ಅವರನ್ನು ಮಧ್ಯಪ್ರದೇಶದ ಉಪ ನಾಯಕರನ್ನಾಗಿ ನೇಮಿಸುವ ಪ್ರಸ್ತಾವನೆಯನ್ನು ಕಾಂಗ್ರೆಸ್ ಅಧ್ಯಕ್ಷರು ಅನುಮೋದಿಸಿದ್ದಾರೆ' ಎಂದು ಹೇಳಿಕೆ ತಿಳಿಸಿದೆ.