ನವದೆಹಲಿ: ಸಂಸದರು ಖಾಸಗಿಯಾಗಿ ವಿದೇಶಗಳಿಗೆ ತೆರಳಿದ ಸಂದರ್ಭಗಳಲ್ಲಿ, ಅಲ್ಲಿನ ಆತಿಥ್ಯ ಸ್ವೀಕರಿಸುವಾಗ ಕಠಿಣ ಮಾರ್ಗಸೂಚಿಗಳನ್ನು ಪಾಲಿಸಬೇಕು, ಕೇಂದ್ರ ಸರ್ಕಾರದ ಪೂರ್ವಾನುಮತಿ ಪಡೆಯಬೇಕು ಎಂದು ರಾಜ್ಯಸಭಾ ಸಚಿವಾಲಯ ಗುರುವಾರ ಆದೇಶ ಹೊರಡಿಸಿದೆ.

ಸಂಸದರು ನೀತಿಸಂಹಿತೆ ಪಾಲಿಸಬೇಕು, ಸಂಸದರಾಗಿ ತಾವು ನಿರ್ವಹಿಸಬೇಕಿರುವ ಕರ್ತವ್ಯಗಳನ್ನು ನಿಷ್ಪಕ್ಷಪಾತವಾಗಿ ನಿರ್ವಹಿಸಲು ಅಡ್ಡಿ ಉಂಟುಮಾಡಬಹುದಾದ ಉಡುಗೊರೆಗಳನ್ನು ಪಡೆಯಬಾರದು ಎಂದು ಆದೇಶದಲ್ಲಿ ಹೇಳಲಾಗಿದೆ.