HEALTH TIPS

ಕೇಂದ್ರಾಡಳಿತ ಪ್ರದೇಶದಲ್ಲಿ ಮಹಿಳಾ ಮೀಸಲಾತಿ ವಿಸ್ತರಣೆ: ಲೋಕಸಭೆಯಲ್ಲಿ ಮಸೂದೆಮಂಡನೆ

              ವದೆಹಲಿ: ಕೇಂದ್ರಾಡಳಿತ ಪ್ರದೇಶಗಳಾದ ಪುದುಚೇರಿ, ಜಮ್ಮ ಮತ್ತು ಕಾಶ್ಮೀರಕ್ಕೂ ಮಹಿಳಾ ಮೀಸಲಾತಿ ಮಸೂದೆಯ ಉಪಲಬ್ಧತೆಯನ್ನು ವಿಸ್ತರಿಸುವ ಪ್ರಸ್ತಾವ ಹೊಂದಿರುವ ಎರಡು ಮಸೂದೆಗಳನ್ನು ಮಂಗಳವಾರ ಲೋಕಸಭೆಯಲ್ಲಿ ಮಂಡಿಸಲಾಯಿತು.

               ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರಾಯ್‌ ಅವರು ಜಮ್ಮು ಮತ್ತು ಕಾಶ್ಮೀರ ಮರುಜೋಡಣೆ -2019 (ಎರಡನೇ ತಿದ್ದುಪಡಿ) ಮಸೂದೆ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಗಳ (ತಿದ್ದುಪಡಿ) ಮಸೂದೆಯನ್ನು ಲೋಕಸಭೆಗೆ ಪರಿಚಯಿಸಿದರು.

               ಜಮ್ಮು ಮತ್ತು ಕಾಶ್ಮೀರ ಮರುಜೋಡಣಾ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಮಹಿಳೆಯರಿಗೆ ರಾಜ್ಯಗಳ ವಿಧಾನಸಭೆಯಲ್ಲಿ ಶೇ 33 ಮೀಸಲಾತಿ ನೀಡಲಾಗಿರುವ ಸಂವಿಧಾನದ 106ನೇ ತಿದ್ದುಪಡಿ ಕಾಯ್ದೆಯನ್ನು ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದಲ್ಲೂ ಜಾರಿ ಮಾಡಬೇಕು. ಮಹಿಳಾ ಮೀಸಲಾತಿ ಮಸೂದೆಯನ್ನು ಪುದುಚೇರಿಗೂ ವಿಸ್ತರಿಸಲು, ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಗಳ ಕಾಯ್ದೆ-1963ಕ್ಕೆ ತಿದ್ದುಪಡಿ ತರಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದರು.

                   ಈ ಎರಡೂ ಮಸೂದೆಗಳಿಗೆ ಲೋಕಸಭೆಯಲ್ಲಿ ಅಂಗೀಕಾರ ದೊರೆತರೆ ಕೇಂದ್ರಾಡಳಿತ ಪ್ರದೇಶಗಳ ವಿಧಾನಸಭೆಗಳಲ್ಲಿ ಮಹಿಳೆಯರ ಪ್ರಾತಿನಿಧ್ಯ ಹೆಚ್ಚುತ್ತದೆ ಎಂದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries