ಕಾಸರಗೋಡು: ಬಿಜೆಪಿಯ ಕಾಸರಗೋಡು ಜಿಲ್ಲೆಯ ಇಬ್ಬರು ಹಿರಿಯ ಮುಖಂಡರನ್ನು ರಾಜ್ಯ ಕಾರ್ಯಕಾರಿ ಸಮಿತಿಗೆ ಆಯ್ಕೆ ಮಾಡಲಾಗಿದೆ. ಖ್ಯಾತ ವಕೀಲ, ಬಿಜೆಪಿ ಕಾಸರಗೋಡು ಜಿಲ್ಲಾ ಮಾಜಿ ಅಧ್ಯಕ್ಷ ಎಂ. ನಾರಾಯಣ ಭಟ್ ಅವರನ್ನು ಪಕ್ಷದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಹಾಗೂ ಪಕ್ಷದ ಕೋಯಿಕ್ಕೋಡ್ ವಲಯ ಮಾಜಿ ಅಧ್ಯಕ್ಷ, ಹಿರಿಯ ಮುಖಂಡ ವಿ. ರವೀಂದ್ರನ್ ಅವರನ್ನು ಪಕ್ಷದ ರಾಜ್ಯ ಕೌನ್ಸಿಲ್ ಸದಸ್ಯರನ್ನಾಗಿ ಆಯ್ಕೆ ಮಾಡಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಕೆ. ಸುರೇಂದ್ರನ್ ಅವರು ಈ ಆಯ್ಕೆ ಮಾಡಿದ್ದಾರೆ.