ನವದೆಹಲಿ: ಲೋಕಸಭೆ ಸದಸ್ಯತ್ವದಿಂದ ತಮ್ಮನ್ನು ಉಚ್ಚಾಟಿಸಿರುವ ಬಗ್ಗೆ ಪ್ರತಿಕ್ರಿಯಿಸಿರುವ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೋಯಿತ್ರಾ, ಈ ಕ್ರಮವು 'ಕಾಂಗರೂ ನ್ಯಾಯಾಲಯವೊಂದು ನೇಣು ಶಿಕ್ಷೆ ವಿಧಿಸಿದಂತಿದೆ' ಎಂದು ಟೀಕಿಸಿದ್ದಾರೆ.
ನವದೆಹಲಿ: ಲೋಕಸಭೆ ಸದಸ್ಯತ್ವದಿಂದ ತಮ್ಮನ್ನು ಉಚ್ಚಾಟಿಸಿರುವ ಬಗ್ಗೆ ಪ್ರತಿಕ್ರಿಯಿಸಿರುವ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೋಯಿತ್ರಾ, ಈ ಕ್ರಮವು 'ಕಾಂಗರೂ ನ್ಯಾಯಾಲಯವೊಂದು ನೇಣು ಶಿಕ್ಷೆ ವಿಧಿಸಿದಂತಿದೆ' ಎಂದು ಟೀಕಿಸಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿರುವ ಅವರು, ಕೇಂದ್ರ ಸರ್ಕಾರವು ವಿರೋಧ ಪಕ್ಷಗಳನ್ನು ತೆಪ್ಪಗಿರಿಸಲು ಸಂಸದೀಯ ಸಮಿತಿಯನ್ನು ಅಸ್ತ್ರವಾಗಿ ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ.
ಅಸ್ತಿತ್ವದಲ್ಲಿ ಇಲ್ಲದ ನೀತಿ ಸಂಹಿತೆಯ ಉಲ್ಲಂಘನೆ ಮಾಡಿದ್ದೇನೆ ಎಂದು ಆರೋಪಿಸಿ ನನ್ನನ್ನು ಲೋಕಸಭೆಯಿಂದ ಉಚ್ಚಾಟಿಸಲಾಗಿದೆ. ನಾನು ಹಣ ಅಥವಾ ಉಡುಗೊರೆಯನ್ನು ಪಡೆದುಕೊಂಡಿದ್ದೇನೆ ಎಂಬುದಕ್ಕೆ ಯಾವುದೇ ಸಾಕ್ಷ್ಯಗಳು ಇಲ್ಲ ಎಂದು ಹೇಳಿದ್ದಾರೆ.
ಮಹುವಾ ಅವರು ತಮ್ಮ ಸಂಸತ್ ಸದಸ್ಯತ್ವದ ಐಡಿ ಮತ್ತು ಪಾಸ್‌ವರ್ಡ್‌ಗಳನ್ನು ಅನಧಿಕೃತ ವ್ಯಕ್ತಿಗಳೊಂದಿಗೆ ಹಂಚಿಕೊಳ್ಳುವ ಮೂಲಕ 'ಅನೈತಿಕವಾಗಿ' ನಡೆದುಕೊಂಡಿದ್ದಾರೆ. ಇದು ರಾಷ್ಟ್ರೀಯ ಭದ್ರತೆಯ ಮೇಲೆ ಪರಿಣಾಮ ಉಂಟುಮಾಡಲಿದೆ ಎಂದು ಆರೋಪಿಸಿದ್ದ ಲೋಕಸಭೆಯ ನೀತಿ ಸಮಿತಿಯು, ಅವರನ್ನು (ಮಹುವಾ) ಲೋಕಸಭೆಯಿಂದ ಉಚ್ಚಾಟಿಸುವಂತೆ ಶಿಫಾರಸು ಮಾಡಿ, ಅದಕ್ಕೆ ಸಂಬಂಧಿಸಿದ 495 ಪುಟಗಳ ವರದಿಯನ್ನು ಇಂದು ಲೋಕಸಭೆಯಲ್ಲಿ ಮಂಡಿಸಿತ್ತು.