ಮಂಜೇಶ್ವರ : ಕಾಸರಗೋಡು ಅಭಿವೃದ್ಧಿ ಪ್ಯಾಕೇಜ್ ಯೋಜನೆಯಡಿ ಮಂಜೂರಾಗಿ ನಿರ್ಮಾಣಗೊಂಡ ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ನೂತನ ಅಡುಗೆ ಕೋಣೆ ಹಾಗೂ ಊಟದ ಸಭಾಂಗಣ ಕಟ್ಟಡದ ಉದ್ಘಾಟನಾ ಸಮಾರಂಭ ಶುಕ್ರವಾರ ನಡೆಯಿತು. ಮಂಜೇಶ್ವರ ಶಾಸಕ ಎ.ಕೆ.ಎಂ ಅಶ್ರಫ್ ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೀಂಜ ಗ್ರಾಮ ಪಂಚಾಯತಿ ಅಧ್ಯಕ್ಷೆ ಸುಂದರಿ ಆರ್ ಶೆಟ್ಟಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕಾಸರಗೋಡು ಜಿಲ್ಲಾ ಪಂಚಾಯತಿ ಸದಸ್ಯೆ ಕಮಲಾಕ್ಷಿ, ಮಂಜೇಶ್ವರ ಬ್ಲಾಕ್ ಪಂಚಾಯತಿ ಸದಸ್ಯೆ ಅಶ್ವಿನಿ ಎಂ.ಎಲ್ ಆಗಮಿಸಿದ್ದರು. ಮೀಂಜ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಜಯರಾಮ ಬಲ್ಲಂಗುಡೇಲ್, ವಿದ್ಯಾಭ್ಯಾಸ ಮತ್ತು ಆರೋಗ್ಯ ಸ್ಥಾಯೀ ಸಮಿತಿಯ ಅಧ್ಯಕ್ಷೆ ಸರಸ್ವತಿ ಕೆ, ಕ್ಷೇಮ ಸ್ಥಾಯೀ ಸಮಿತಿ ಅಧ್ಯಕ್ಷ ಬಾಬು ಸಿ, ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷ ರುಕ್ಯಾ ಸಿದ್ಧಿಕ್, ವಾರ್ಡ್ ಸದಸ್ಯ ಜನಾರ್ಧನ ಪೂಜಾರಿ, ಮಂಜೇಶ್ವರ ಉಪಜಿಲ್ಲಾ ಪ್ರಭಾರ ಶಿಕ್ಷಣಾಧಿಕಾರಿ ಜಿತೇಂದ್ರ ಎಸ್ ಎಚ್, ಮೀಂಜ ಪಂಚಾಯತಿ ಸಹಾಯಕ ಅಭಿಯಂತರ ರೆಂಜಿ ಕ್ಸೇವಿಯರ್, ನಿವೃತ್ತ ಮುಖ್ಯೋಪಾಧ್ಯಾಯ ಸತ್ಯನಾರಾಯಣ ಶರ್ಮ ಪಿ, ಶಾಲಾ ವ್ಯವಸ್ಥಾಪಕ ಸಮಿತಿ ಅಧ್ಯಕ್ಷ ಸತೀಶ್ ಎಲಿಯಾಣ, ಶತಮಾನೋತ್ಸವ ಸಮಿತಿಯ ಅಧ್ಯಕ್ಷ ಮಹಮ್ಮದ್ ಹಾಜಿ ಕಂಚಿಲ, ಮಾಜಿ ಸದಸ್ಯರು ಹಾಗೂ ಸಮಾಜ ಸೇವಕರಾದ ಮಹಮ್ಮದ್ ಕುಂಞÂ್ಞ, ಶಾಲಾ ಮಾತೃ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಸುಚರಿತ ಚಿನಾಲ, ಪ್ರಿ ಪ್ರೈಮರಿ ವಿಭಾಗದ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಚೈತ್ರ ಕಲ್ಕಾರ್ ಉಪಸ್ಥಿತರಿದ್ದು ಶುಭ ಹಾರೈಸಿದರು.
ಇದೇ ಸಂದರ್ಭದಲ್ಲಿ ನೂತನ ಕಟ್ಟಡದ ಕಾಮಗಾರಿಯನ್ನು ಅಚ್ಚುಕಟ್ಟಾಗಿ ನೆರವೇರಿಸಿದ ಬಿಲ್ಡಿಂಗ್ ಕಾಂಟ್ರಾಕ್ಟರ್ ಹುಸೇನ್ ಕುಂಞÂ್ಞ ಹಾಗೂ ಪಿ.ಡಬ್ಲ್ಯೂ.ಡಿ ಎಲೆಕ್ಟ್ರಿಕಲ್ ಕಾಂಟ್ರಾಕ್ಟರ್ ಗಿರೀಶ್ ಇವರನ್ನು ಶಾಲು ಹೊದೆಸಿ, ಸ್ಮರಣಿಕೆ ನೀಡಿ ಗೌರವಿಸಲಾಯಿತು.
ಶಾಲಾ ಮುಖ್ಯ ಶಿಕ್ಷಕಿ ಮಾಲತಿ ಸ್ವಾಗತಿಸಿ, ಶಿಕ್ಷಕಿ ಸೌಮ್ಯ ಪಿ ವಂದಿಸಿದರು. ಶಾಲಾ ಶಿಕ್ಷಕ ಜಯಪ್ರಶಾಂತ್ ಪಾಲೆಂಗ್ರಿ ಕಾರ್ಯಕ್ರಮ ನಿರೂಪಿಸಿದರು. ಶಾಲಾ ಶತಮಾನೋತ್ಸವ ಸಮಿತಿಯ ಸದಸ್ಯರು, ಶಿಕ್ಷಕ ವೃಂದ ಉಪಸ್ಥಿತರಿದ್ದು ಸಹಕರಿಸಿದರು.