ಹೈದರಾಬಾದ್: ಮತ ಎಣಿಕೆ ನಡೆಯುತ್ತಿರುವಾಗಲೇ ತೆಲಂಗಾಣ ಕಾಂಗ್ರೆಸ್ ಅಧ್ಯಕ್ಷ ರೇವಂತ್ ರೆಡ್ಡಿ ಅವರನ್ನು ಭೇಟಿಯಾಗಿ ಶುಭಾಶಯ ಕೋರಿದ ಆರೋಪದ ಅಡಿ ಚುನಾವಣಾ ಆಯೋಗ ತೆಲಂಗಾಣ ಡಿಜಿಪಿ ಅಂಜನಿ ಕುಮಾರ್ ಅವರನ್ನು ಅಮಾನತು ಮಾಡಿದೆ.
ಹೈದರಾಬಾದ್: ಮತ ಎಣಿಕೆ ನಡೆಯುತ್ತಿರುವಾಗಲೇ ತೆಲಂಗಾಣ ಕಾಂಗ್ರೆಸ್ ಅಧ್ಯಕ್ಷ ರೇವಂತ್ ರೆಡ್ಡಿ ಅವರನ್ನು ಭೇಟಿಯಾಗಿ ಶುಭಾಶಯ ಕೋರಿದ ಆರೋಪದ ಅಡಿ ಚುನಾವಣಾ ಆಯೋಗ ತೆಲಂಗಾಣ ಡಿಜಿಪಿ ಅಂಜನಿ ಕುಮಾರ್ ಅವರನ್ನು ಅಮಾನತು ಮಾಡಿದೆ.
ಭಾನುವಾರ ತೆಲಂಗಾಣ ಚುನಾವಣೆಯ ಪೂರ್ಣ ಫಲಿತಾಂಶ ಬರುವ ಮುನ್ನವೇ ಡಿಜಿಪಿ ಅವರು, ರೇವಂತ್ ರೆಡ್ಡಿ ಅವರನ್ನು ಭೇಟಿಯಾಗಿ ಶುಭಾಶಯ ಕೋರಿದ್ದರು.
ಈ ಕುರಿತು ಸುದ್ದಿಸಂಸ್ಥೆ ಎಎನ್‌ಐ ಟ್ವೀಟ್ ಮಾಡಿದೆ. ಚುನಾವಣಾ ನೀತಿ ಸಂಹಿತಿ ಉಲ್ಲಂಘನೆ ಆರೋಪದಡಿ ಅವರನ್ನು ಅಮಾನತು ಮಾಡಲಾಗಿದೆ.
ತಮ್ಮ ಸಹೋದ್ಯೋಗಿಗಳ ಜೊತೆ ಅಂಜನಿ ಕುಮಾರ್ ಅವರು ರೇವಂತ್ ರೆಡ್ಡಿ ಅವರನ್ನು ಭೇಟಿಯಾಗಿ ಶುಭಾಶಯ ಕೋರಿದ್ದರು.
ಇಂದು ನಡೆದ ಮತ ಎಣಿಕೆಯಲ್ಲಿ ತೆಲಂಗಾಣದಲ್ಲಿ ಕಾಂಗ್ರೆಸ್ 65 ಸ್ಥಾನಗಳಲ್ಲಿ ಜಯಶಾಲಿಯಾಗಿ ಅಧಿಕಾರ ರಚಿಸುತ್ತಿದೆ. ಆಡಳಿತಾರೂಢ ಬಿಆರ್‌ಎಸ್‌ಗೆ ತೀವ್ರ ಮುಖಭಂಗವಾಗಿದ್ದು 39 ಸ್ಥಾನಗಳನ್ನಷ್ಟೇ ಪಡೆದಿದೆ. ಬಿಜೆಪಿ 8 ಸ್ಥಾನಗಳಲ್ಲಿ ಜಯಶಾಲಿಯಾಗಿದೆ.