HEALTH TIPS

ಜಿಯೋದಿಂದ 'ಭಾರತ್‌ ಜಿಪಿಟಿ' ಅಭಿವೃದ್ಧಿ

             ಮುಂಬೈ: 'ಭಾರತ್‌ ಜಿಪಿಟಿ' ಅಭಿವೃದ್ಧಿ ಸಂಬಂಧ ಐಐಟಿ-ಬಾಂಬೆ ಜೊತೆಗೆ ರಿಲಯನ್ಸ್‌ ಜಿಯೋ ಸಂಸ್ಥೆಯು ಜೊತೆಯಾಗಿ ಕೆಲಸ ನಿರ್ವಹಿಸಲಿದೆ ಎಂದು ರಿಲಯನ್ಸ್‌ ಜಿಯೋ ಇನ್ಫೋಕಾಮ್ ಮುಖ್ಯಸ್ಥ ಆಕಾಶ್ ಅಂಬಾನಿ ಹೇಳಿದ್ದಾರೆ.

                ಐಐಟಿ-ಬಾಂಬೆಯಲ್ಲಿ ಬುಧವಾರ ನಡೆದ ಟೆಕ್‌ಫೆಸ್ಟ್‌ನಲ್ಲಿ ಮಾತನಾಡಿದ ಅವರು, 'ಭಾರತ್ ಜಿಪಿಟಿ' ಅಭಿವೃದ್ಧಿಗಾಗಿ ಐಐಟಿ ಜೊತೆ ಕೈಜೋಡಿಸಲು ನಿರ್ಧರಿಸಲಾಗಿದೆ ಎಂದರು.

              ಅಲ್ಲದೇ, ಜಿಯೋ ಇನ್ಫೋಕಾಮ್‌ನಿಂದ ಟಿ.ವಿಗಾಗಿ ಆಪರೇಟಿವ್ ಸಿಸ್ಟಂ ಅಭಿವೃದ್ಧಿಪಡಿಸುವುದಕ್ಕೂ ಚಿಂತಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಈಗಾಗಲೇ ಕೆಲಸ ನಿರ್ವಹಿಸಲಾಗುತ್ತಿದೆ ಎಂದು ತಿಳಿಸಿದರು.

                ಪ್ರಸ್ತುತ ಎಲ್ಲಾ ಕ್ಷೇತ್ರಗಳಲ್ಲೂ ಕೃತಕ ಬುದ್ಧಿಮತ್ತೆಯು ಪರಿವರ್ತನೆ ತರುತ್ತಿದೆ. ಇದಕ್ಕೆ ಸಂಬಂಧಿಸಿದ ಅಪ್ಲಿಕೇಷನ್‌ಗಳ ಅಭಿವೃದ್ಧಿಗೆ ಕಂಪನಿ ಮುಂದಾಗಿದೆ ಎಂದು ತಿಳಿಸಿದರು.

ಕಂಪನಿಯ ಅಭಿವೃದ್ಧಿಗೆ ಪೂರಕವಾದ ಪರಿಸರ ವ್ಯವಸ್ಥೆ ರೂಪಿಸುವುದು ಅತಿಮುಖ್ಯ. ಈ ನಿಟ್ಟಿನಲ್ಲಿ 'ಜಿಯೋ 2.0' ದೃಷ್ಟಿಯಲ್ಲಿ ಇಟ್ಟುಕೊಂಡು ಈಗಾಗಲೇ ಕೆಲಸ ಆರಂಭಿಸಲಾಗಿದೆ ಎಂದು ಹೇಳಿದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries