ಥಾಣೆ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಮುಂಬ್ರಾ ಪ್ರದೇಶದಲ್ಲಿ ಭಾನುವಾರ ಎರಡು ಮೊಬೈಲ್ ಫೋನ್ ಟವರ್‌ಗಳಿಗೆ ಬೆಂಕಿ ಹೊತ್ತಿಕೊಂಡಿದೆ ಎಂದು ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.
ಥಾಣೆ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಮುಂಬ್ರಾ ಪ್ರದೇಶದಲ್ಲಿ ಭಾನುವಾರ ಎರಡು ಮೊಬೈಲ್ ಫೋನ್ ಟವರ್‌ಗಳಿಗೆ ಬೆಂಕಿ ಹೊತ್ತಿಕೊಂಡಿದೆ ಎಂದು ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಕಿ ಅವಘಡದಲ್ಲಿ ಯಾವುದೇ ವ್ಯಕ್ತಿಗೆ ಗಾಯಗಳಾಗಿಲ್ಲ ಎಂದು ಥಾಣೆ ಮುನ್ಸಿಪಲ್ ಕಾರ್ಪೊರೇಶನ್‌ನ ವಿಪತ್ತು ನಿರ್ವಹಣಾ ಕೋಶದ ಮುಖ್ಯಸ್ಥ ಯಾಸಿನ್ ತಾದ್ವಿ ತಿಳಿಸಿದ್ದಾರೆ.
ಎರಡು ಟವರ್‌ಗಳನ್ನು ಸ್ಥಾಪಿಸಿರುವ ಚಾಲ್‌ನಲ್ಲಿ (ವಠಾರದಲ್ಲಿ) ಮುಂಜಾನೆ 4.12ಕ್ಕೆ ಬೆಂಕಿ ಕಾಣಿಸಿಕೊಂಡಿದೆ ಎಂದು ಅವರು ಹೇಳಿದರು.
ಬೆಂಕಿಯ ರಭಸಕ್ಕೆ ಟವರ್‌ಗಳು ಮತ್ತು ಅವುಗಳ ವೈರಿಂಗ್‌ಗೆ ಹಾನಿಯಾಗಿದೆ ಎಂದು ಅವರು ಹೇಳಿದರು.
ಸ್ಥಳೀಯ ಅಗ್ನಿಶಾಮಕ ಸಿಬ್ಬಂದಿ ಮತ್ತು ವಿಪತ್ತು ನಿರ್ವಹಣಾ ಸೆಲ್ ತಂಡವು ಸ್ಥಳಕ್ಕೆ ಧಾವಿಸಿ ಒಂದು ಗಂಟೆಗೂ ಹೆಚ್ಚು ಸಮಯ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಬೆಂಕಿ ಅನಾಹುತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ.