ನವದೆಹಲಿ: ಯಾವುದೇ ರಾಜ್ಯದಲ್ಲಿ ಸರ್ಕಾರ ಉತ್ತಮ ರೀತಿಯಲ್ಲಿ ಆಡಳಿತ ನಡೆಸುತ್ತಿದ್ದಾಗ 'ಆಡಳಿತ ವಿರೋಧಿ' ಪದವು ಅಪ್ರಸ್ತುತವಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ನವದೆಹಲಿ: ಯಾವುದೇ ರಾಜ್ಯದಲ್ಲಿ ಸರ್ಕಾರ ಉತ್ತಮ ರೀತಿಯಲ್ಲಿ ಆಡಳಿತ ನಡೆಸುತ್ತಿದ್ದಾಗ 'ಆಡಳಿತ ವಿರೋಧಿ' ಪದವು ಅಪ್ರಸ್ತುತವಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭವಾಗಿದೆ. ಅಧಿವೇಶನಕ್ಕೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ಈಗಾಗಲೇ ಹೊರಬಿದ್ದಿದೆ.
'ವಿರೋಧ ಪಕ್ಷದಲ್ಲಿ ಕುಳಿತಿರುವ ನಮ್ಮ ಸಹೋದ್ಯೋಗಿಗಳಿಗೆ (ವಿಪಕ್ಷ ನಾಯಕರಿಗೆ) ಇದೊಂದು ಸುವರ್ಣಾವಕಾಶ. ಈ ಬಾರಿಯ ಅಧಿವೇಶನದಲ್ಲಿ ಚುನಾವಣಾ ಸೋಲಿನ ಹತಾಶೆಯನ್ನು ಹೊರ ಬನ್ನಿ, ಸೋಲನ್ನು ಸಕಾರಾತ್ಮಕವಾಗಿ ತೆಗೆದುಕೊಂಡು ಮುನ್ನಡೆಯಿರಿ' ಎಂದು ಸಲಹೆ ನೀಡುತ್ತೇನೆ' ಎಂದು ಮೋದಿ ಹೇಳಿದ್ದಾರೆ.
ಕಳೆದ 9 ವರ್ಷಗಳಿಂದ ತೋರಿದ ನಕಾರಾತ್ಮಕ ಪ್ರವೃತ್ತಿಯನ್ನು ಬಿಟ್ಟುಬಿಡಿ. ಸೋಲಿನಿಂದ ಪಾಠಯನ್ನು ಕಲಿಯಿರಿ ಎಂದು ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳ ವಿರುದ್ಧ ಮೋದಿ ವಾಗ್ದಾಳಿ ನಡೆಸಿದ್ದಾರೆ.
ಮತದಾರರು ನಕಾರಾತ್ಮಕತೆಯನ್ನು ತಿರಸ್ಕರಿಸಿದ್ದಾರೆ. ಅಧಿವೇಶನ ಆರಂಭಕ್ಕೂ ಮುನ್ನ ನಾವು ವಿರೋಧ ಪಕ್ಷದ ನಾಯಕರೊಂದಿಗೆ ಚರ್ಚೆ ನಡೆಸಿದ್ದೇವೆ. ಕಲಾಪ ಸುಗಮವಾಗಿ ನಡೆಯಲು ಸಹಕಾರ ನೀಡುವಂತೆಯೂ ಒತ್ತಾಯಿಸಿದ್ದೇವೆ. ದೇಶದ ಅಭಿವೃದ್ಧಿಗಾಗಿ ಶ್ರಮಿಸೋಣ ಎಂದು ಹೇಳಿದ್ದಾರೆ.