ನವದೆಹಲಿ: ಸರ್ಕಾರ ನಡೆಸಲು ಬಿಜೆಪಿ ಯೋಗ್ಯ ಪಕ್ಷ ಎಂದು ಜನರು ಆರಿಸಿರುವುದಾಗಿ ಚುನಾವಣಾ ಫಲಿತಾಂಶ ಅಂಕಿಅಂಶವನ್ನು ಮುಂದಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿ ಪ್ರತಿಪಾದಿಸಿದ್ದಾರೆ.
ನವದೆಹಲಿ: ಸರ್ಕಾರ ನಡೆಸಲು ಬಿಜೆಪಿ ಯೋಗ್ಯ ಪಕ್ಷ ಎಂದು ಜನರು ಆರಿಸಿರುವುದಾಗಿ ಚುನಾವಣಾ ಫಲಿತಾಂಶ ಅಂಕಿಅಂಶವನ್ನು ಮುಂದಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿ ಪ್ರತಿಪಾದಿಸಿದ್ದಾರೆ.
ಚುನಾವಣೆಯಲ್ಲಿ ಕಾಂಗ್ರೆಸ್‌ಗಿಂತಲೂ ಬಿಜೆಪಿ ಉತ್ತಮ ಸಾಧನೆ ಮಾಡಿರುವುದನ್ನು ಪ್ರಧಾನಿ ಮೋದಿ ಉಲ್ಲೇಖ ಮಾಡಿದ್ದಾರೆ.
ಅಧಿಕಾರದಲ್ಲಿದ್ದಾಗ ಬಿಜೆಪಿ ಯಶಸ್ಸಿನ ಪ್ರಮಾಣ ಶೇ 56ರಷ್ಟಿದೆ ಎಂದು ಮೋದಿ ಉಲ್ಲೇಖಿಸಿದ್ದಾರೆ.
ಇದು ಯಾವುದೇ ವ್ಯಕ್ತಿಯ ವೈಯಕ್ತಿಕ ಗೆಲುವಲ್ಲ. ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನ ಸಮಗ್ರ ಯತ್ನದ ಫಲವಾಗಿದೆ ಎಂದು ಅವರು ಹೇಳಿದ್ದಾರೆ.
ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ ಬಳಿಕ ಇಂದು ನಡೆದ ಬಿಜೆಪಿ ಸಂಸದೀಯ ಪಕ್ಷದ ಸಭೆಯಲ್ಲಿ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಮೋದಿಯವರ ನಾಯಕತ್ವವೇ ಪಕ್ಷದ ಬೃಹತ್ ಗೆಲುವಿಗೆ ಪ್ರಮುಖ ಕಾರಣ ಎಂದು ಬಿಜೆಪಿಯ ಸಂಸದರು ಹೊಗಳಿದ್ದಾರೆ.