ನವದೆಹಲಿ: ಗುಜರಾತ್‌ನ ವೆರಾವಲ್ ಕರಾವಳಿಯಿಂದ ಸುಮಾರು 200 ಕಿ.ಮೀ ದೂರ ಅರಬ್ಬಿ ಸಮುದ್ರದಲ್ಲಿ ಇಸ್ರೇಲ್ ಸಂಯೋಜಿತ ವ್ಯಾಪಾರಿ ಹಡಗೊಂದರ ಮೇಲೆ ಶನಿವಾರ ಅಪರಿಚಿತ ಡ್ರೋನ್ ದಾಳಿ ನಡೆದಿರುವುದು ವರದಿಯಾಗಿದೆ.
ನವದೆಹಲಿ: ಗುಜರಾತ್‌ನ ವೆರಾವಲ್ ಕರಾವಳಿಯಿಂದ ಸುಮಾರು 200 ಕಿ.ಮೀ ದೂರ ಅರಬ್ಬಿ ಸಮುದ್ರದಲ್ಲಿ ಇಸ್ರೇಲ್ ಸಂಯೋಜಿತ ವ್ಯಾಪಾರಿ ಹಡಗೊಂದರ ಮೇಲೆ ಶನಿವಾರ ಅಪರಿಚಿತ ಡ್ರೋನ್ ದಾಳಿ ನಡೆದಿರುವುದು ವರದಿಯಾಗಿದೆ.
ಲೈಬೀರಿಯನ್ ಧ್ವಜ ಹೊಂದಿದ್ದ ಹಡಗಿನ ಮೇಲೆ ದಾಳಿಯಾಗಿದ್ದು, ಈ ಹಡಗು ತೈಲ ಟ್ಯಾಂಕುಗಳೊಂದಿಗೆ ಸೌದಿ ಅರೇಬಿಯಾದಿಂದ ಭಾರತಕ್ಕೆ ಬರುತ್ತಿತ್ತು.
ಈ ಘಟನೆ ಬಗ್ಗೆ ಭಾರತೀಯ ನೌಕಾದಳ ಯಾವುದೇ ತಕ್ಷಣದ ಪ್ರತಿಕ್ರಿಯೆ ನೀಡಿಲ್ಲ. ಡ್ರೋನ್ ದಾಳಿಯ ಹೊಣೆಯನ್ನು ಇದುವರೆಗೆ ಯಾರೂ ಹೊತ್ತುಕೊಂಡಿಲ್ಲ.
ಇಸ್ರೇಲ್, ಪ್ಯಾಲೆಸ್ಟೀನ್ ನಡುವೆ ಯುದ್ಧ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕೆಂಪು ಸಮುದ್ರದಲ್ಲಿ ಇಸ್ರೇಲ್ ಹಡಗುಗಳ ಮೇಲೆ ಇರಾನ್ ಬೆಂಬಲಿತ ಹೌತಿ ಉಗ್ರರು ಇದೇ ರೀತಿಯ ದಾಳಿ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.