ಬದಿಯಡ್ಕ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ, ಬಿ.ಸಿ.ಟ್ರಸ್ಟ್ ಕಾಸರಗೋಡು ಮತ್ತು ಬದಿಯಡ್ಕ ವಲಯದ ಮಾನ್ಯ ಕಾರ್ಯಕ್ಷೇತ್ರದ ಪ್ರಗತಿಬಂಧು, ಸ್ವ ಸಹಾಯ ಸಂಘಗಳ ಮತ್ತು ಕಾರ್ಮಾರು ಶ್ರೀಮಹಾವಿಷ್ಣು ದೇವಸ್ಥಾನದ ಆಶ್ರಯದಲ್ಲಿ ಸಾಮೂಹಿಕ ‘ಶ್ರೀಸತ್ಯನಾರಾಯಣ ಪೂಜೆ’ ಡಿ.4 ರಂದು ಕಾರ್ಮಾರು ಶ್ರೀವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಡೆಯಲಿದೆ.
ಕಾರ್ಯಕ್ರಮದ ಅಂಗವಾಗಿ ಅಂದು ಬೆಳಿಗ್ಗೆ 8.30ಕ್ಕೆ ಸಾಮೂಹಿಕ ಶ್ರೀಸತ್ಯನಾರಾಯಣ ಪೂಜಾರಂಭ, 10 ಕ್ಕೆ ಮಹಾಮಂಗಳಾರತಿ, ಪ್ರಸಾದ ವಿತರಣೆರ ನಡೆಯಲಿದೆ. ಬಳಿಕ 11 ಕ್ಕೆ ನಡೆಯಲಿರುವ ಸಭಾ ಕಾರ್ಯಕ್ರಮದಲ್ಲಿ ಮಾನ್ಯ ಒಕ್ಕೂಟದ ಅಧ್ಯಕ್ಷ ಸುನಿಲ್ ಕುಮಾರ್ ಅಧ್ಯಕ್ಷತೆ ವಹಿಸುವರು. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ, ಬಿ.ಸಿ.ಟ್ರಸ್ಟ್ ಜಿಲ್ಲಾ ನಿರ್ದೇಶಕ ಪ್ರವೀಣ್ ಕುಮಾರ್ ಉದ್ಘಾಟಿಸುವರು. ಬದಿಯಡ್ಕ ಶ್ರೀಭಾರತೀ ವಿದ್ಯಾಪೀಠದ ಮುಖ್ಯೋಪಾಧ್ಯಾಯ ಸತ್ಯನಾರಾಯಣ ಶರ್ಮ ಪಂಜಿತ್ತಡ್ಕ ಧಾರ್ಮಿಕ ಉಪನ್ಯಾಸ ನೀಡುವರು. ಶ್ರೀಕ್ಷೇತ್ರದ ಆಡಳಿತ ಮೊಕ್ತೇಸರ ನರಸಿಂಹ ಭಟ್, ಬದಿಯಡ್ಕ ಗ್ರಾ.ಪಂ.ಸದಸ್ಯರಾದ ಶಾಮಪ್ರಸಾದ್ ಮಾನ್ಯ, ಅನಸೂಯ, ಜನಜಾಗೃತಿ ವೇದಿಕೆ ವಲಯ ಅಧ್ಯಕ್ಷ ಅಖಿಲೇಶ್ ನಗುಮುಗಂ, ಯೋಜನಾಧಿಕಾರಿ ಮುಖೇಶ್, ಒಕ್ಕೂಟದ ವಲಯಾಧ್ಯಕ್ಷ ರೋಹಿತಾಕ್ಷ, ಕಾರ್ಮಾರು ಶ್ರೀಕ್ಷೇತ್ರದ ಜೀರ್ಣೋದ್ದಾರ ಸಮಿತಿ ಕಾರ್ಯದರ್ಶಿ ಮಹೇಶ್ ವಳಕ್ಕುಂಜ, ಕಾರ್ಮಾರು ಶ್ರೀಕ್ಷೇತ್ರದ ಮಹಿಳಾ ಸಂಘದ ಅಧ್ಯಕ್ಷೆ ಜ್ಯೋತಿ.ಕೆ. ಅತಿಥಿಗಳಾಗಿ ಉಪಸ್ಥಿತರಿರುವರು. ಸಭಾ ಕಾರ್ಯಕ್ರಮದ ಬಳಿಕ ಸ್ವ ಸಹಾಯ ಸಂಘದ ಸದಸ್ಯರಿಂದ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿರುವುದೆಂದು ಸಂಬಂಧಪಟ್ಟವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.