ಎರ್ನಾಕುಳಂ: ಮುಖ್ಯಮಂತ್ರಿಗಳು ಮತ್ತು ಸಚಿವರು ಸಂಚರಿಸುತ್ತಿದ್ದ ನವಕೇರಳ ಬಸ್‍ಗೆ ಕೆಎಸ್‍ಯು ಕಾರ್ಯಕರ್ತರು ಕಪ್ಪು ಶೂ ಎಸೆದಿದ್ದಾರೆ.
ಶೂ ಎಸೆದ ಕಾರ್ಯಕರ್ತರ ಮೇಲೆ ಪೋಲೀಸರು ಲಾಠಿ ಚಾರ್ಜ್ ಮಾಡಿದರು. ನಾಲ್ವರು ಕೆಎಸ್‍ಯು ಕಾರ್ಯಕರ್ತರನ್ನು ಪೆÇಲೀಸರು ವಶಕ್ಕೆ ಪಡೆದಿದ್ದಾರೆ. ಪೋಲೀಸ್ ದೌರ್ಜನ್ಯದ ವಿರುದ್ಧ ಕೆಎಸ್‍ಯು ತೀವ್ರ ಪ್ರತಿಭಟನೆ ನಡೆಸಲಿದೆ ಎಂದು ಕೆಎಸ್‍ಯು ರಾಜ್ಯಾಧ್ಯಕ್ಷ ಅಲೋಶಿಯಸ್ ಕ್ಸೇವಿಯರ್ ಹೇಳಿದ್ದಾರೆ.
ಇದೇ ವೇಳೆ ಪ್ರತಿಭಟನಾಕಾರರಿಗೆ ಎಚ್ಚರಿಕೆ ನೀಡಿದ ಮುಖ್ಯಮಂತ್ರಿ ಶೂ ಎಸೆದರೆ, ಇತರ ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಶೋಕಿಸುವುದರಲ್ಲಿ ಅರ್ಥವಿಲ್ಲ ಎಂದು ಮುಖ್ಯಮಂತ್ರಿ ಹೇಳಿದರು.