ಕಾನ್ಪುರ: ಐಐಟಿ ಕಾನ್ಪುರದ ಪ್ರಾಧ್ಯಾಪಕರೊಬ್ಬರು ಹಳೆಯ ವಿದ್ಯಾರ್ಥಿಗಳ ಸಭೆಯಲ್ಲಿ ಉಪನ್ಯಾಸ ನೀಡುತ್ತಿರುವಾಗಲೇ ವೇದಿಕೆಯ ಮೇಲೆ ಕುಸಿದು ಬಿದ್ದು ಮೃತಪಟ್ಟಿದ್ದಾರೆ.
ಐಐಟಿ ಕಾನ್ಪುರ: ಉಪನ್ಯಾಸ ನೀಡುವಾಗಲೇ ಕುಸಿದು ಬಿದ್ದು ಪ್ರಾಧ್ಯಾಪಕ ಸಾವು
0
ಡಿಸೆಂಬರ್ 24, 2023
Tags
ಕಾನ್ಪುರ: ಐಐಟಿ ಕಾನ್ಪುರದ ಪ್ರಾಧ್ಯಾಪಕರೊಬ್ಬರು ಹಳೆಯ ವಿದ್ಯಾರ್ಥಿಗಳ ಸಭೆಯಲ್ಲಿ ಉಪನ್ಯಾಸ ನೀಡುತ್ತಿರುವಾಗಲೇ ವೇದಿಕೆಯ ಮೇಲೆ ಕುಸಿದು ಬಿದ್ದು ಮೃತಪಟ್ಟಿದ್ದಾರೆ.
ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾಗಿದ್ದ ಸಮೀರ್ ಖಂಡೇಕರ್ ಮೃತ ಪ್ರಾಧ್ಯಾಪಕರು. ಅವರಿಗೆ 53 ವರ್ಷ ವಯಸ್ಸಾಗಿತ್ತು.
ಹಳೆಯ ವಿದ್ಯಾರ್ಥಿಗಳ ಸಭೆಯಲ್ಲಿ ಭಾಗವಹಿಸಿದ್ದ ಅವರು ವೇದಿಕೆಯ ಮೇಲೆ ಉಪನ್ಯಾಸ ನೀಡುತ್ತಿದ್ದಾಗ ಕುಸಿದು ಬಿದ್ದರು. ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆ ವೇಳೆಗೆ ಅವರು ಮೃತಪಟ್ಟಿದ್ದರು. ಸಮೀರ್ ಖಾಂಡೇಕರ್ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ವೈದ್ಯರು ಹೇಳಿದರು.
ಐದು ವರ್ಷಗಳ ಹಿಂದೆ ಖಂಡೇಕರ್ ಅವರಿಗೆ ರಕ್ತದಲ್ಲಿ ಕೊಲೆಸ್ಟ್ರಾಲ್ ಪ್ರಮಾಣ ಹೆಚ್ಚಿರುವುದು ಪತ್ತೆಯಾಗಿತ್ತು. ಅದಕ್ಕಾಗಿ ಅವರು ಚಿಕಿತ್ಸೆ ಪಡೆಯುತ್ತಿದ್ದರು ಎಂದು ಅವರ ಆಪ್ತರು ಹೇಳಿದ್ದಾರೆ.