ತಿರುವನಂತಪುರಂ: ಉಮ್ಮನ್ ಚಾಂಡಿ ಸರ್ಕಾರದ ಅವಧಿಯಲ್ಲಿ ನಡೆದ ವಿಧಾನಸಭೆ ಮೆರವಣಿಗೆ ನಂತರ ನಡೆದ ಸಂಘರ್ಷ ಘಟನೆಗೆ ಸಂಬಂಧಿಸಿ ಸಂಸದ ಎ.ಎ.ರಹೀಮ್ ಮತ್ತು ಎಂ.ಸ್ವರಾಜ್ ಅವರಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ಒಂದು ವರ್ಷ ಜೈಲು ಶಿಕ್ಷೆ ಹಾಗೂ ಒಂದೊಂದು ಲಕ್ಷ ರೂ. ದಂಡ ಕಟ್ಟಬೇಕು ಎಂದು ಕೋರ್ಟ್ ಹೇಳಿದೆ.
ಯುಡಿಎಫ್ ಸರ್ಕಾರದ ಶಿಕ್ಷಣ ನೀತಿಗಳ ವಿರುದ್ಧ ಎಸ್.ಎಫ್.ಐ. ನಡೆಸಿದ ಮಾರ್ಚ್ ಪ್ರತಿಭಟನೆಗೆ ಸಂಬಂಧಿಸಿದ ಪ್ರಕರಣ ಇದಾಗಿದೆ. ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ನಂತರ ಮ್ಯೂಸಿಯಂ ಪೋಲೀಸರು ಸಾರ್ವಜನಿಕ ಆಸ್ತಿಪಾಸ್ತಿ ಧ್ವಂಸಗೊಳಿಸಿದ ವಿರುದ್ಧ ಪ್ರಕರಣ ದಾಖಲಿಸಿದ್ದರು.
ಅಂದು ನಡೆದ ಪ್ರತಿಭಟನೆಯಲ್ಲಿ ಸುಮಾರು 150 ಕಾರ್ಯಕರ್ತರು ಭಾಗವಹಿಸಿದ್ದರು. ಈ ಪ್ರಕರಣದಲ್ಲಿ ತಿರುವನಂತಪುರ 1ನೇ ದರ್ಜೆ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಶಿಕ್ಷೆ ವಿಧಿಸಿದೆ.