ಪೆರ್ಲ : ಎಣ್ಮಕಜೆ ಗ್ರಾಮ ಪಂಚಾಯತಿ ಕುಟುಂಬ ಆರೋಗ್ಯ ಕೇಂದ್ರಕ್ಕೆ ಕುದುಕ್ಕೋಳಿ ಪ್ಯೂಯೆಲ್ಸ್ ವತಿಯಿಂದ ಮುಖದ್ವಾರವನ್ನು ನಿರ್ಮಿಸಿ ದಾನಿ,ಉದ್ಯಮಿ, ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತ ಅಬ್ದುಲ್ಲ ಮಾದುಮೂಲೆಯವರು ಸಮರ್ಪಿಸಿದರು.
ಶನಿವಾರ ನಡೆದ ಸರಳ ಸಮಾರಂಭದಲ್ಲಿ ದ್ವಾರವನ್ನು ಲೋಕಾರ್ಪಣೆಗೊಳಿಸಲಾಯಿತು. ಎಣ್ಮಕಜೆ ಗ್ರಾ.ಪಂ.ಅಧ್ಯಕ್ಷ ಸೋಮಶೇಖರ್ ಜೆ.ಎಸ್. ಅಧ್ಯಕ್ಷತೆವಹಿಸಿದ್ದರು. ಶಿಕ್ಷಣಾಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷೆ ಜಯಶ್ರೀ ಕುಲಾಲ್, ಮೆಡಿಕಲ್ ಆಫೀಸರ್ ಗ್ರೀμÁ್ಮ ಮೊದಲಾದವರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಕೊಡುಗೈ ದಾನಿ ಅಬ್ದುಲ್ಲ ಮಾದುಮೂಲೆಯವರನ್ನು ಎಫ್ ಎಚ್ ಸಿ ವತಿಯಿಂದ ಅಭಿನಂದಿಸಲಾಯಿತು.ಸಜಿತ್ ಸ್ವಾಗತಿಸಿ ಬಿಜಿತ್ ವಂದಿಸಿದರು.