ನವದೆಹಲಿ: ಭಾರತವನ್ನು 2047ರ ಹೊತ್ತಿಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿಸುವ ಸಂಕಲ್ಪವನ್ನು ಕಾರ್ಯಗತಗೊಳಿಸುವ ನಿಟ್ಟಿನಲ್ಲಿ ಸಣ್ಣ ನಗರಗಳು ಮಹತ್ವದ ಪಾತ್ರವನ್ನು ವಹಿಸುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಹೇಳಿದ್ದಾರೆ.

'ವಿಕಸಿತ ಭಾರತ ಸಂಕಲ್ಪ ಯಾತ್ರೆ'ಯ ಅಂಗವಾಗಿ ಫಲಾನುಭವಿಗಳ ಜೊತೆ ವಿಡಿಯೊ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದ ಅವರು, ಸಣ್ಣ ನಗರಗಳಲ್ಲಿ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಮತ್ತು ಅಲ್ಲಿನ ಜನರ ಜೀವನ ಮಟ್ಟ ಸುಧಾರಣೆಗಾಗಿ ಕೇಂದ್ರ ಸರ್ಕಾರವು ಕಾರ್ಯಪ್ರವೃತ್ತವಾಗಿದೆ ಎಂದಿದ್ದಾರೆ.