ಕರಾಚಿ: ಅಹಮದಾಬಾದ್‌ನಿಂದ ದುಬೈಗೆ ಹೊರಟಿದ್ದ ಸ್ಪೈಸ್‌ಜೆಟ್ ವಿಮಾನವನ್ನು ವೈದ್ಯಕೀಯ ತುರ್ತುಪರಿಸ್ಥಿತಿಯ ಕಾರಣ ಪಾಕಿಸ್ತಾನದ ಕರಾಚಿಯ ಜಿನ್ನಾ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕರಾಚಿ: ಅಹಮದಾಬಾದ್‌ನಿಂದ ದುಬೈಗೆ ಹೊರಟಿದ್ದ ಸ್ಪೈಸ್‌ಜೆಟ್ ವಿಮಾನವನ್ನು ವೈದ್ಯಕೀಯ ತುರ್ತುಪರಿಸ್ಥಿತಿಯ ಕಾರಣ ಪಾಕಿಸ್ತಾನದ ಕರಾಚಿಯ ಜಿನ್ನಾ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಂಗಳವಾರ ರಾತ್ರಿ 9.30ರ ಸುಮಾರಿಗೆ ಸ್ಪೈಸ್‌ಜೆಟ್ ವಿಮಾನವು ತುರ್ತು ಭೂಸ್ಪರ್ಶ ಮಾಡಿದ್ದು, ಪ್ರಯಾಣಿಕರೊಬ್ಬರಿಗೆ ವೈದ್ಯಕೀಯ ನೆರವು ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
'ಬೋಯಿಂಗ್- 737 ವಿಮಾನವು ಅಹಮದಾಬಾದ್‌ನಿಂದ ದುಬೈಗೆ ಹೋಗುತ್ತಿದ್ದಾಗ 27 ವರ್ಷದ ಪ್ರಯಾಣಿಕ ಧರ್ವಾಲ್ ದರ್ಮೇಶ್ ಅವರಿಗೆ ಹೃದಯಾಘಾತದ ಲಕ್ಷಣಗಳು ಕಂಡುಬಂದಿದೆ. ಅವರಿಗೆ ತುರ್ತು ವೈದ್ಯಕೀಯ ಚಿಕಿತ್ಸೆ ಅಗತ್ಯವಿತ್ತು'ಎಂದು ನಾಗರಿಕ ವಿಮಾನಯಾನ ಪ್ರಾಧಿಕಾರದ (ಸಿಎಎ) ವಕ್ತಾರರು ತಿಳಿಸಿದ್ದಾರೆ.
ಸಿಎಎಯ ವೈದ್ಯಕೀಯ ತಂಡವು ಪ್ರಯಾಣಿಕರಿಗೆ ತುರ್ತು ವೈದ್ಯಕೀಯ ನೆರವು ನೀಡಿದೆ. ಪ್ರಯಾಣಿಕನ ರಕ್ತದ ಸಕ್ಕರೆ ಮಟ್ಟವು ಕುಸಿದು, ತೀವ್ರ ಬಡಿತವಿತ್ತು ಎಂದು ಅವರು ಹೇಳಿದ್ದಾರೆ.
'ವೈದ್ಯಕೀಯ ಚಿಕಿತ್ಸೆ ಪಡೆದ ನಂತರ ಪ್ರಯಾಣಿಕ ಚೇತರಿಸಿಕೊಂಡಿದ್ದಾರೆ. ವಿಮಾನಕ್ಕೆ ಇಂಧನ ತುಂಬಿಸಲಾಗಿದ್ದು, ದುಬೈಗೆ ಹಾರಲಿದೆ'ಎಂದು ಅಧಿಕಾರಿ ತಿಳಿಸಿದ್ದಾರೆ.
ಮಂಗಳವಾರ ರಾತ್ರಿ, ಅಹಮದಾಬಾದ್‌ನಿಂದ ದುಬೈಗೆ ತೆರಳುತ್ತಿದ್ದ ಸ್ಪೈಸ್‌ಜೆಟ್ ವಿಮಾನವನ್ನು ಕರಾಚಿಯತ್ತ ತಿರುಗಿಸಲಾಗಿದೆ ಎಂದು ನವದೆಹಲಿಯಲ್ಲಿ ಏರ್‌ಲೈನ್‌ನ ವಕ್ತಾರರು ತಿಳಿಸಿದ್ದಾರೆ.