ನವದೆಹಲಿ: ಪ್ಯಾಲೆಸ್ಟೀನ್‌ನ ಬಂಡುಕೋರ ಸಂಘಟನೆ 'ಹಮಾಸ್'ಗೆ ಸಂಬಂಧಿಸಿ ಸಂಸತ್ತಿನಲ್ಲಿ ಕಾಂಗ್ರೆಸ್ ಸಂಸದರೊಬ್ಬರು ಕೇಳಿದ್ದ ಪ್ರಶ್ನೆಗೆ ಡಿ.8ರಂದು ಉತ್ತರಿಸಿದ ಸಚಿವರ ಹೆಸರನ್ನು ಸರಿಪಡಿಸಿ ವಿದೇಶಾಂಗ ಸಚಿವಾಲಯ ಸೋಮವಾರ ಲೋಕಸಭೆಯಲ್ಲಿ ಹೇಳಿಕೆ ನೀಡಿದೆ.

'ಹಮಾಸ್ ಅನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸುವ ಕುರಿತು ಲೋಕಸಭೆಯಲ್ಲಿ ಕೇಳಿದ್ದ ಪ್ರಶ್ನೆಯನ್ನು ನಾನು ಅನುಮೋದಿಸಿಲ್ಲ.
ವಿದೇಶಾಂಗ ಖಾತೆಯ ಮತ್ತೊಬ್ಬ ರಾಜ್ಯ ಸಚಿವ ಮುರಳೀಧರನ್ ಅವರು ಸದನದಲ್ಲಿ ಈ ಬಗ್ಗೆ ಸೋಮವಾರ ಹೇಳಿಕೆ ನೀಡಿದ್ದಾರೆ. 'ಹಮಾಸ್ ಅನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸುವ ಕುರಿತು ಸಂಸದ ಕುಂಬಕುಡಿ ಸುಧಾಕರನ್ ಡಿ.8ರಂದು ಕೇಳಿದ್ದ ಚುಕ್ಕೆ ರಹಿತ ಪ್ರಶ್ನೆ ಸಂಖ್ಯೆ 980ಕ್ಕೆ ನೀಡಿದ ಉತ್ತರ ಸರಿಪಡಿಸಲಾಗಿದೆ. ಇದನ್ನು ಪೂರಕ ಕಾರ್ಯಸೂಚಿಯಲ್ಲಿ ಸೇರಿಸಲಾಗಿದೆ' ಎಂದು ಸ್ಪಷ್ಟಪಡಿಸಿದ್ದಾರೆ.
ಚುಕ್ಕೆ ಪ್ರಶ್ನೆಗಳಿಗೆ ಸಚಿವರು ಸದನದಲ್ಲಿ ಮೌಖಿಕ ಉತ್ತರ ನೀಡುತ್ತಾರೆ. ಚುಕ್ಕೆ ರಹಿತ ಪ್ರಶ್ನೆಗಳಿಗೆ ಲಿಖಿತ ಉತ್ತರ ನೀಡಲಾಗುತ್ತದೆ.