ನವದೆಹಲಿ: ದೆಹಲಿಯಲ್ಲಿರುವ ಇಸ್ರೇಲ್ ರಾಯಭಾರಿ ಕಚೇರಿ ಬಳಿ ಸ್ಫೋಟ ಸಂಭವಿಸಲಿದೆ ಎಂದು ಅಪರಿಚಿತ ವ್ಯಕ್ತಿಯೊಬ್ಬರು ದೂರವಾಣಿ ಕರೆ ಮಾಡಿ ಬೆದರಿಕೆ ಹಾಕಿರುವುದಾಗಿ ದೆಹಲಿ ಪೊಲೀಸರು ತಿಳಿಸಿದ್ದಾರೆ.
ನವದೆಹಲಿ: ದೆಹಲಿಯಲ್ಲಿರುವ ಇಸ್ರೇಲ್ ರಾಯಭಾರಿ ಕಚೇರಿ ಬಳಿ ಸ್ಫೋಟ ಸಂಭವಿಸಲಿದೆ ಎಂದು ಅಪರಿಚಿತ ವ್ಯಕ್ತಿಯೊಬ್ಬರು ದೂರವಾಣಿ ಕರೆ ಮಾಡಿ ಬೆದರಿಕೆ ಹಾಕಿರುವುದಾಗಿ ದೆಹಲಿ ಪೊಲೀಸರು ತಿಳಿಸಿದ್ದಾರೆ.
ಇದಕ್ಕೂ ಮುನ್ನ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ರಿಸರ್ವ್ ಬ್ಯಾಂಕ್‌ನ ಗವರ್ನರ್ ಶಕ್ತಿಕಾಂತ ದಾಸ್ ರಾಜೀನಾಮೆಗೆ ಒತ್ತಾಯಿಸಿ ಮೂರು ಸ್ಥಳಗಳಲ್ಲಿ 11 ಬಾಂಬ್‌ಗಳನ್ನು ಇಡುವುದಾಗಿ ಬೆದರಿಕೆಯ ಇ-ಮೇಲ್ ಅನ್ನು ಭಾರತೀಯ ರಿಸರ್ವ್ ಬ್ಯಾಂಕ್‌ಗೆ (ಆರ್‌ಬಿಐ) ಕಳುಹಿಸಲಾಗಿದೆ.
ಇ -ಮೇಲ್ ಕಳುಹಿಸಿದವರನ್ನು ಪತ್ತೆಹಚ್ಚಲು ಮುಂಬೈ ಪೊಲೀಸರು ಮತ್ತು ಭದ್ರತಾ ಪಡೆಗಳು ತಕ್ಷಣವೇ ತನಿಖೆ ಆರಂಭಿಸಿದ್ದಾರೆ.