ತ್ರಿಶೂರ್: ಪ್ರಧಾನಿ ನರೇಂದ್ರ ಮೋದಿ ಅವರ ತ್ರಿಶೂರ್ ಭೇಟಿಗೆ ಸಂಬಂಧಿಸಿದ ಸಿದ್ಧತೆಗಳ ಕುರಿತು ಚರ್ಚಿಸಲು ಜಿಲ್ಲಾಧಿಕಾರಿ ವಿ.ಆರ್.ಕೃಷ್ಣ ತೇಜ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.
ಜ.3ರಂದು ವಡಕ್ಕುಂನಾಥ ದೇವಸ್ಥಾನ ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ಹಾಗೂ ಭದ್ರತಾ ವ್ಯವಸ್ಥೆಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಕಾರ್ಯಕ್ರಮದಲ್ಲಿ ಭಾಗವಹಿಸುವ ಜನರಿಗೆ ಕುಡಿಯುವ ನೀರು, ಸ್ವಯಂಸೇವಕರ ಸೇವೆ ಮತ್ತಿತರ ಸೌಲಭ್ಯಗಳನ್ನು ಒದಗಿಸುವಂತೆ ಜಿಲ್ಲಾಧಿಕಾರಿಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. 30ರಂದು ಮತ್ತೊಮ್ಮೆ ಸಭೆ ನಡೆಸಿ ಸಿದ್ಧತೆಗಳ ಪರಿಶೀಲನೆ ನಡೆಸಲಾಗುವುದು. ಜಿಲ್ಲಾಧಿಕಾರಿ ಕಚೇರಿ ಕಾರ್ಯನಿರ್ವಾಹಕ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸಬ್‍ಕಲೆಕ್ಟರ್ ಮೊಹಮ್ಮದ್ ಶೇಫಿಕ್ ಹಾಗೂ ವಿವಿಧ ಇಲಾಖೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.