ನವದೆಹಲಿ: ಸಂಸತ್ತಿನ ಭದ್ರತಾ ಲೋಪ ಪ್ರಕರಣದ ಐದನೇ ಆರೋಪಿ ಲಿಲಿತ್ ಝಾ ಅವರ ಪೊಲೀಸ್ ವಶದ ಅವಧಿಯನ್ನು ಜನವರಿ 5ರವರೆಗೆ ವಿಸ್ತರಿಸಿ ದೆಹಲಿಯ ನ್ಯಾಯಾಲಯ ಆದೇಶ ಹೊರಡಿಸಿದೆ. ಈ ಕುರಿತು ಸುದ್ದಿಸಂಸ್ಥೆ 'ಎಎನ್‌ಐ' ವರದಿ ಮಾಡಿದೆ.
ನವದೆಹಲಿ: ಸಂಸತ್ತಿನ ಭದ್ರತಾ ಲೋಪ ಪ್ರಕರಣದ ಐದನೇ ಆರೋಪಿ ಲಿಲಿತ್ ಝಾ ಅವರ ಪೊಲೀಸ್ ವಶದ ಅವಧಿಯನ್ನು ಜನವರಿ 5ರವರೆಗೆ ವಿಸ್ತರಿಸಿ ದೆಹಲಿಯ ನ್ಯಾಯಾಲಯ ಆದೇಶ ಹೊರಡಿಸಿದೆ. ಈ ಕುರಿತು ಸುದ್ದಿಸಂಸ್ಥೆ 'ಎಎನ್‌ಐ' ವರದಿ ಮಾಡಿದೆ.
ಪ್ರಕರಣದಲ್ಲಿ ಇತರೆ ನಾಲ್ವರು ಆರೋಪಿಗಳಾದ ಮನೋರಂಜನ್ ಡಿ., ಸಾಗರ್ ಶರ್ಮಾ, ಅಮೋಲ್ ಧನರಾಜ್ ಶಿಂದೆ ಮತ್ತು ನೀಲಂ ದೇವಿ ಅವರ ಪೊಲೀಸ್ ವಶದ ಅವಧಿಯನ್ನು ಜನವರಿ 5ರವರೆಗೆ ವಿಸ್ತರಿಸಿ ವಿಶೇಷ ನ್ಯಾಯಾಧೀಶೆ ಹರದೀಪ್ ಕೌರ್ ಗುರುವಾರ ಆದೇಶ ಹೊರಡಿಸಿದ್ದರು.
ಪ್ರಕರಣ ಸಂಬಂಧ ಈವರೆಗೆ ಆರು ಮಂದಿಯನ್ನು (ಲಲಿತ್ ಝಾ, ಮಹೇಶ್ ಕುಮಾವತ್, ಡಿ.ಮನೋರಂಜನ್, ಸಾಗರ್ ಶರ್ಮಾ, ಅಮೋಲ್ ಶಿಂಧೆ, ನೀಲಂ ಶರ್ಮಾ) ಬಂಧಿಸಲಾಗಿದೆ. ಮತ್ತಿಬ್ಬರನ್ನು ವಿಚಾರಣೆ ನಡೆಸಲಾಗಿದೆ.
ಸಂಸತ್ ಮೇಲಿನ ದಾಳಿಯ 22ನೇ ವರ್ಷದ ಕಹಿ ನೆನಪಿನ ದಿನವೇ ಭಾರಿ ಭದ್ರತಾ ಲೋಪದ ಘಟನೆಗೆ ಲೋಕಸಭೆ ಸಾಕ್ಷಿಯಾಗಿತ್ತು. ಡಿಸೆಂಬರ್ 13ರಂದು ಕಲಾಪ ನಡೆಯುತ್ತಿರುವಾಗಲೇ ಇಬ್ಬರು ಯುವಕರು ಸಂದರ್ಶಕರ ಗ್ಯಾಲರಿಯಿಂದ ಸದನದೊಳಗೆ ಜಿಗಿದು ಘೋಷಣೆಗಳನ್ನು ಕೂಗುತ್ತಾ 'ಸ್ಮೋಕ್ ಕ್ಯಾನ್' (ಹಳದಿ ಬಣ್ಣದ ಹೊಗೆ) ಹಾರಿಸಿ ದಾಂಧಲೆ ಎಬ್ಬಿಸಿದ್ದರು. ಇದೇ ಸಮಯದಲ್ಲಿ ಮತ್ತಿಬ್ಬರು ಸಂಸತ್‌ನ ಹೊರಗಡೆ ಪ್ರತಿಭಟನೆ ನಡೆಸಿದ್ದರು.