ಮಂಜೇಶ್ವರ: ಟಾಟ ಕನ್ಸಲ್ಟೆನ್ಸಿ ಸಂಸ್ಥೆಯ ಹಿರಿಯ ಉದ್ಯೋಗಿಯೂ ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯರೂ ಅಗಿರುವ ಅರವಿಂದ ಹೊಳ್ಳರನ್ನು ಇತ್ತೀಚೆಗೆ ಸಾರ್ವಜನಿಕವಾಗಿ ಗೌರವಿಸಲಾಯಿತು. ಮೀಯಪದವು ವಿದ್ಯಾವರ್ಧಕ ಕಲಾ ಸಂಸ್ಥೆಯ ವತಿಯಿಂದ ಚಿಗುರುಪಾದೆ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆದ ಹನುಮಗಿರಿ ಮೇಳದ ಯಕ್ಷಗಾನ ಬಯಲಾಟದ ಸಂದರ್ಭದಲ್ಲಿ ಎಡನೀರು ಮಠಾಧೀಶ ಶ್ರೀಸಚ್ಚಿದಾನಂದ ಭಾರತಿ ಸ್ವಾಮೀಜಿ, ಕೊಂಡೆವೂರು ಮಠದ ಶ್ರೀಯೋಗಾನಂದ ಸರಸ್ವತೀ ಸ್ವಾಮೀಜಿ ಇವರ ಗೌರವ ಉಪಸ್ಥಿತಿಯಲ್ಲಿ ಗೌರವಿಸಲಾಯಿತು.
ಅರವಿಂದ ಹೊಳ್ಳರು ಮುತುವರ್ಜಿಯಿಂದ ವಿದ್ಯಾವರ್ಧಕ ಹೈಯರ್ ಸೆಕಂಡರಿ ಶಾಲೆಗೆ ಟಾಟ ಕನ್ಸಲ್ಟೆನ್ಸಿ ಸಂಸ್ಥೆಯ ವತಿಯಿಂದ 10 ಕಂಪ್ಯೂಟರ್ ಒದಗಿಸಿದ್ದರು. ಶಾಲಾ ಸಂಚಾಲಕ ಡಾ. ಜಯಪ್ರಕಾಶ ನಾರಾಯಣ, ಶಾಲಾ ಪ್ರಾಂಶುಪಾಲರು, ಮುಖ್ಯೋಪಾಧ್ಯಾಯರು ಹಾಗೂ ಅಧ್ಯಾಪಕರು ಉಪಸ್ಥಿತರಿದ್ದರು.