ಶ್ರೀನಗರ: ಶ್ರೀನಗರದ ಬೆಮಿನಾ ಪ್ರದೇಶದಲ್ಲಿ ಕಳೆದ ವಾರ ಪೊಲೀಸ್ ಮೇಲೆ ನಡೆದ ದಾಳಿಯಲ್ಲಿ ಭಾಗಿಯಾಗಿದ್ದ ಮೂವರು 'ಹೈಬ್ರಿಡ್' ಭಯೋತ್ಪಾದಕರನ್ನು ಬಂಧಿಸಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಪೊಲೀಸ್ ಮಹಾನಿರ್ದೇಶಕ ಆರ್. ಆರ್. ಸ್ವೈನ್ ಭಾನುವಾರ ತಿಳಿಸಿದ್ದಾರೆ.

ಡಿಸೆಂಬರ್ 9 ರಂದು ಕರ್ತವ್ಯ ಮುಗಿಸಿ ಮನೆಗೆ ಮರಳುತ್ತಿದ್ದ ಕಾನ್‌ಸ್ಟೆಬಲ್ ಮೊಹಮ್ಮದ್ ಹಫೀಜ್ ಚಾಕ್ ಮೇಲೆ ಹಲ್ಲೆ ನಡೆಸಲಾಗಿತ್ತು.
ಪಾಕಿಸ್ತಾನ ಮೂಲದ ಭಯೋತ್ಪಾದಕ ಅರ್ಜುಮಂಡ್ ಅಲಿಯಾಸ್ ಹಮ್ಜಾ ಬುರ್ಹಾನ್ ಈ ದಾಳಿಯ ಸಂಚು ರೂಪಿಸಿದ್ದು, ಸ್ಥಳೀಯ ಮಾಸ್ಟರ್ ಮೈಂಡ್ ಡ್ಯಾನಿಶ್ ಅಹ್ಮದ್ ಮಲ್ಲಾ ಅವರೊಂದಿಗೆ ಸಂಪರ್ಕ ಹೊಂದಿದ್ದ ಎಂದು ಡಿಜಿಪಿ ಹೇಳಿದರು.
ಪೊಲೀಸ್ ಮೇಲೆ ದಾಳಿ ಮಾಡಿದ ಹೈಬ್ರಿಡ್ ಭಯೋತ್ಪಾದಕರು ನಂತರ ತಮ್ಮ ನಿತ್ಯದ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.