ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ), ಎಚ್‌ಡಿಎಫ್‌ಸಿ ಬ್ಯಾಂಕ್, ಐಸಿಐಸಿಐ ಬ್ಯಾಂಕ್ ಸೇರಿದಂತೆ 11 ಕಡೆಗಳಲ್ಲಿ ಬಾಂಬ್ ಇಡಲಾಗಿದೆ ಎಂದು ಬೆದರಿಕೆ ಇ-ಮೇಲ್ ಕಳುಹಿಸಿದ್ದ ವ್ಯಕ್ತಿಯನ್ನು ಮುಂಬೈನ ಕ್ರೈಂ ಬ್ರಾಂಚ್ ಪೊಲೀಸರು ಬುಧವಾರ ಬಂಧಿಸಿದ್ದಾರೆ.

ಇ-ಮೇಲ್ ಹಿಂದಿರುವ ಉದ್ದೇಶವನ್ನು ಅರಿತುಕೊಳ್ಳಲು ವಿಚಾರಣೆ ಆರಂಭಿಸಲಾಗಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.
ಗುಜರಾತ್‌ನ ವಡೋದರ ಮೂಲದ ವ್ಯಕ್ತಿ ಬಂಧನಕ್ಕೊಳಗಾದವ.
ಆರ್‌ಬಿಐ ಕಚೇರಿ, ಎಚ್‌ಡಿಎಫ್‌ಸಿ ಹಾಗೂ ಐಸಿಸಿಐ ಬ್ಯಾಂಕ್ ಸೇರಿದಂತೆ ಮುಂಬೈ 11 ಕಡೆಗಳಲ್ಲಿ ಬಾಂಬ್ ಇರಿಸಲಾಗಿದೆ ಎಂದು ಆರ್‌ಬಿಐಗೆ ಆರೋಪಿ ಇ-ಮೇಲ್ ಮಾಡಿದ್ದ. ಅಲ್ಲದೆ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಹಾಗೂ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರಾಜೀನಾಮೆ ನೀಡಬೇಕು ಎನ್ನುವ ಆಗ್ರಹವೂ ಅದರಲ್ಲಿ ಇತ್ತು.
ಇ-ಮೇಲ್‌ನಲ್ಲಿದ್ದ 11 ತಾಣಗಳಲ್ಲಿ ಪೊಲೀಸರು ಶೋಧ ಕಾರ್ಯ ನಡೆಸಿದ್ದರು. ಅಲ್ಲಿ ಬಾಂಬ್ ಅಥವಾ ಯಾವುದೇ ಶಂಕಾಸ್ಪದ ವಸ್ತುಗಳು ಪತ್ತೆಯಾಗಿರಲಿಲ್ಲ.