ಕಾಸರಗೋಡು: ವಿಸೇಷ ಪರಿಷ್ಕøತ ಚುನಾವಣಾ ಮತದಾರರ ಪಟ್ಟಿಯ ಪರಿಷ್ಕರಣೆ ಹಿನ್ನೆಲೆಯಲ್ಲಿ ವಿಶೇಷ ಅಭಿಯಾನ ಹಿನ್ನೆಲೆಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು, ವಿವಿಧ ಇಲಾಖೆ ಅಧಿಕಾರಿಗಳ ಸಬೆ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಜರುಗಿತು. ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೆ. ಇನ್ಬಾಶೇಖರ್ ಅಧ್ಯಕ್ಷತೆ ವಹಿಸಿದ್ದರು. ಡಿ.3ರಂದು ಬೂತ್ ಮಟ್ಟದ ಅಧಿಕಾರಿಗಳು ತಮ್ಮ ತಮ್ಮ ಮತಗಟ್ಟೆಗಳಲ್ಲಿ ಹಾಜರಿರುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.
ಸಾರ್ವಜನಿಕರು ಕರಡು ಮತದಾರರ ಪಟ್ಟಿಯನ್ನು ಪರಿಶೀಲಿಸಿ ಅದಕ್ಕೆ ಸಂಬಂಧಿಸಿದಂತೆ ಆಕ್ಷೇಪ ಮತ್ತು ದೂರುಗಳಿದ್ದಲ್ಲಿ ಡಿಸೆಂಬರ್ 9 ರೊಳಗೆ ಆನ್‍ಲೈನ್‍ನಲ್ಲಿ ಸಲ್ಲಿಸಬೇಕು.
2024ರ ಜನವರಿ 1ಕ್ಕೆ ಹದಿನೆಂಟು ವರ್ಷ ಪೂರ್ಣಗೊಳ್ಳುವವರು ಮತದಾರರ ಪಟ್ಟಿಗೆ ಹೆಸರು ಸೇರಿಸಲು ಅರ್ಹರಾಗಿದ್ದು, ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಎಲ್ಲಾ ರಾಜಕೀಯ ಪಕ್ಷಗಳು ಮತ್ತು ಸಾರ್ವಜನಿಕರು ಮತದಾರರ ಕರಡು ಪಟ್ಟಿಯನ್ನು ಪರಿಶೀಲಿಸಿ ಗೈರುಹಾಜರಾದವರು, ತಮ್ಮ ನಿವಾಸವನ್ನು ಬದಲಾಯಿಸಿದವರು ಅಥವಾ ಮರಣ ಹೊಂದಿದವರು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗದಂತೆ ನೋಡಿಕೊಳ್ಳಬೇಕು ಎಂದೂ ತಿಳಿಸಿದರು.
ಕಾಸರಗೋಡು ಆರ್‍ಡಿಒ ಅತುಲ್ ಎಸ್ ನಾಥ್, ಜಿಲ್ಲಾಧಿಕಾರಿ ಎಲ್‍ಎ ವಿ.ಎಂ ದಿನೇಶ್ ಕುಮಾರ್, ಸಹಾಯಕ ಜಿಲ್ಲಾಧಿಕಾರಿ(ಎಲ್‍ಆರ್) ಜಗ್ಗಿ ಪೌಲ್, ಚುನಾವಣಾ ವಿಭಾಗದ ಡೆಪ್ಯುಟಿ ಕಲೆಕ್ಟರ್ ಕೆ ಅಜೇಶ್, ತಹಸೀಲ್ದಾರ್‍ಗಳಾದ ಟಿ. ಕೆ.ಉನ್ನಿಕೃಷ್ಣನ್, ಉಣ್ಣಿಕೃಷ್ಣ ಪಿಳ್ಳೈ, ಟಿ.ಸಾಜಿ, ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು, ಚುನಾವಣಾ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.