ಕಾಸರಗೋಡು: ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕøತಿಕ ಪ್ರತಿಷ್ಠಾನ (ರಿ.)ದ ನೂತನ ಕಟ್ಟಡದ ಲೋಕಾರ್ಪಣೆಯ ಕಾರ್ಯಕ್ರಮ ಡಿಸೆಂಬರ್ 26ರಂದು ಜರುಗಲಿದೆ. ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ, ರಾಜರ್ಷಿ ಪದ್ಮವಿಭೂಷಣ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಸಾಂಸ್ಕೃತಿಕ ಭವನವನ್ನು ಲೋಕಾರ್ಪಣೆಗೊಳಿಸುವರು. ಕಾರ್ಯಕ್ರಮದ ಯಶಸ್ಸಿಗಾಗಿ ಪ್ರತಿಷ್ಟನ ವಠಾರದಲ್ಲಿ ಪೂರ್ವಭಾವಿ ಸಭೆ ನಡೆಯಿತು. ಪ್ರತಿಷ್ಠಾನದ ಅಧ್ಯಕ್ಷ ಶ್ರೀ ಸಿರಿಬಾಗಿಲು ರಾಮಕೃಷ್ಣ ಮಯ್ಯ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಅನೇಕ ಗಣ್ಯರು ಸಲಹೆ ಸೂಚನೆ ನೀಡಿದರು. ಈ ಸಂದರ್ಭ ವಿವಿಧ ಉಪಸಮಿತಿಗಳನ್ನು ರಚಿಸಲಾಯಿತು. ಊರ ಪರವೂರ ಗಣ್ಯರು, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.
ಇಂದು ಆಮಂತ್ರಣಪತ್ರಿಕೆ ಬಿಡುಗಡೆ:
ಸಿರಿಬಾಗಿಲು ಪ್ರತಿಷ್ಠಾನದ ಸಾಂಸ್ಕøತಿಕ ಭವನ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಡಿ. 9ರಂದು ಮಧ್ಯಾಹ್ನ 2 ಗಂಟೆಗೆ ಶ್ರೀ ಎಡನೀರು ಮಠದಲ್ಲಿ ನಡೆಯಲಿರುವುದು. ಶ್ರೀ ಮದ್ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸುವರು.