ನವದೆಹಲಿ: ಸಂಸತ್ ಭವನದಲ್ಲಿ ನಡೆದಿದ್ದ ಭದ್ರತಾ ವೈಫಲ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿ ಮಹೇಶ್ ಕುಮಾವತ್‌ನನ್ನು ಇಂದು (ಶನಿವಾರ) ಪೊಲೀಸರು ಬಂಧಿಸಿದ್ದಾರೆ.
ನವದೆಹಲಿ: ಸಂಸತ್ ಭವನದಲ್ಲಿ ನಡೆದಿದ್ದ ಭದ್ರತಾ ವೈಫಲ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿ ಮಹೇಶ್ ಕುಮಾವತ್‌ನನ್ನು ಇಂದು (ಶನಿವಾರ) ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ದೆಹಲಿಯ ಪಟಿಯಾಲ ಹೌಸ್ ಕೋರ್ಟ್‌ನ ನ್ಯಾಯಾಧೀಶರ ಮುಂದೆ ಶೀಘ್ರದಲ್ಲೇ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿರುವುದಾಗಿ ಸುದ್ದಿಸಂಸ್ಥೆ 'ಎಎನ್‌ಐ' ವರದಿ ಮಾಡಿದೆ.
ಘಟನೆಯ ಮಾಸ್ಟರ್ ಮೈಂಡ್ ಎಂದು ಹೇಳಲಾದ ಲಲಿತ್ ಝಾ ಸೇರಿದಂತೆ ಮೈಸೂರಿನ ವಿಜಯನಗರ ನಿವಾಸಿಯಾಗಿರುವ ಎಂಜಿನಿಯರಿಂಗ್ ಪದವೀಧರ ಮನೋರಂಜನ್ ಡಿ. ಹಾಗೂ ಲಖನೌದ ಸಾಗರ್ ಶರ್ಮಾ, ಹರಿಯಾಣದ ಹಿಸಾರ್‌ನ ನೀಲಂ (42) ಮತ್ತು ಮಹಾರಾಷ್ಟ್ರದ ಲಾತೂರ್‌ನ ಅಮೋಲ್ ಶಿಂದೆ (25) ಅವರನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ಒಳಪಡಿಸಿದ್ದಾರೆ.
ಗುರುವಾರ ರಾತ್ರಿ ಲಲಿತ್ ಝಾ ಪೊಲೀಸರಿಗೆ ಶರಣಾಗಿದ್ದಾನೆ. ಇದೇ ವೇಳೆ ಝಾ ಜೊತೆಗಿದ್ದ ಮಹೇಶ್ ಕುಮಾವತ್ ಎಂಬುವರನ್ನೂ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದರು. ರಾಜಸ್ಥಾನದಲ್ಲಿ ಝಾ ಅಡಗಿಕೊಳ್ಳಲು ಮಹೇಶ್ ನೆರವಾಗಿದ್ದರು ಎಂದು ಹೇಳಲಾಗಿದೆ.
ವಿಚಾರಣೆಗೆ ಒಳಗಾಗಿರುವ ಮಹೇಶ್, ಸಂಸತ್ತಿನ ಭದ್ರತೆ ಉಲ್ಲಂಘಿಸಿದ ತಂಡದ ಜತೆ ಇರಬೇಕಿತ್ತು. ಆದರೆ, ಆತ ಅಂದು ಸ್ಥಳಕ್ಕೆ ಬರಲು ಸಾಧ್ಯವಾಗಿರಲಿಲ್ಲ ಎಂದು ಮೂಲಗಳು ಹೇಳಿವೆ.