ರಾಯಪುರ: ಛತ್ತೀಸಗಢದ ನೂತನ ಮುಖ್ಯಮಂತ್ರಿಯಾಗಿ ವಿಷ್ಣುದೇವ್ ಸಾಯ್ ಅವರನ್ನು ಆಯ್ಕೆ ಮಾಡಲಾಗಿದೆ.
ನಗರದಲ್ಲಿ ನಡೆದ ಶಾಸಕರ ಸಭೆಯಲ್ಲಿ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆ ನಡೆದಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ವವಿಷ್ಣುದೇವ್ ಸಾಯ್ ಅವರು 2020ರಿಂದ 2022ರ ವರೆಗೆ ಛತ್ತೀಸಗಢದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿದ್ದರು.
ಡಿಸೆಂಬರ್ 3 ರಂದು ಹೊರಬಿದ್ದ 4 ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶದಲ್ಲಿ ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸಗಢದಲ್ಲಿ ಬಿಜೆಪಿ ಗೆಲುವು ಸಾಧಿಸಿದರೆ, ತೆಲಂಗಾಣದಲ್ಲಿ ಕಾಂಗ್ರೆಸ್ ಜಯ ಸಾಧಿಸಿತ್ತು.
90 ಸ್ಥಾನಗಳ ಛತ್ತೀಸಗಢ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 54ರಲ್ಲಿ ಗೆಲುವು ಸಾಧಿಸುವ ಮೂಲಕ ಅಧಿಕಾರದ ಗೆದ್ದುಗೆ ಏರಿದೆ.
ಫಲಿತಾಂಶಕ್ಕೂ ಮುನ್ನ ಬಹುತೇಕ ಸಮೀಕ್ಷೆಗಳು ಛತ್ತೀಸಗಢದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದು ಹೇಳಿದ್ದವು. ಆದರೆ, ಇದು ಸಾಧ್ಯವಾಗಲಿಲ್ಲ. ಕಾಂಗ್ರೆಸ್ 35 ಸ್ಥಾನಗಳನ್ನಷ್ಟೇ ತನ್ನದಾಗಿಸಿಕೊಂಡಿತ್ತು. ಉಳಿದಂತೆ ಒಂದು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯೊಬ್ಬರು ಗೆಲುವು ಕಂಡಿದ್ದರು.
2018ರ ಚುನಾವಣೆಯಲ್ಲಿ ಕಾಂಗ್ರೆಸ್ 68, ಬಿಜೆಪಿ 15 ಹಾಗೂ ಜಿಜಿಪಿ 2ರಲ್ಲಿ ಗೆಲುವು ಸಾಧಿಸಿದ್ದರು. ಪಕ್ಷೇತರ ಅಭ್ಯರ್ಥಿಗಳು 7 ಸ್ಥಾನಗಳಲ್ಲಿ ಜಯಭೇರಿ ಬಾರಿಸಿದ್ದರು.