ಕೊಚ್ಚಿ: ಭಯೋತ್ಪಾದಕ ಸಂಘಟನೆ ಪಾಪ್ಯುಲರ್ ಫ್ರಂಟ್ ಕರೆ ನೀಡಿದ್ದ ಹರತಾಳದ ವೇಳೆ ಸಾರ್ವಜನಿಕ ಆಸ್ತಿಪಾಸ್ತಿ ನಾಶಪಡಿಸಿದ ಪ್ರಕರಣದಲ್ಲಿ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವಂತೆ ಹೈಕೋರ್ಟ್ ನೀಡಿರುವ ಆದೇಶದ ವಿರುದ್ಧದ ಮರುಪರಿಶೀಲನಾ ಅರ್ಜಿ ವಜಾಗೊಂಡಿದೆ.
ಸೂಕ್ತ ಪ್ರಕ್ರಿಯೆ ಅನುಸರಿಸಿ ಆಸ್ತಿಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೈಕೋರ್ಟ್ ಹೇಳಿದೆ.
ಜಪ್ತಿ ಮಾಡಿದ ಮೊತ್ತವನ್ನು ಪ್ರತ್ಯೇಕ ಖಾತೆಯಲ್ಲಿ ಇಡಲಾಗಿದೆ.ಆರೋಪಿಗಳಿಗೆ ಆಸ್ತಿ ಮುಟ್ಟುಗೋಲು ನೋಟಿಸ್ ನೀಡಲಾಗಿದೆ ಎಂದು ನ್ಯಾಯಾಲಯ ತಿಳಿಸಿದೆ. ನ್ಯಾಯಮೂರ್ತಿಗಳಾದ ಜಯಶಂಕರನ್ ನಂಬಿಯಾರ್ ಮತ್ತು ಮುಹಮ್ಮದ್ ನಿಯಾಜ್ ಅವರಿದ್ದ ವಿಭಾಗೀಯ ಪೀಠ ಅರ್ಜಿಯನ್ನು ವಜಾಗೊಳಿಸಿದೆ. ಹರತಾಳದ ವೇಳೆ ಉಂಟಾದ ನಷ್ಟದ ಅಂತಿಮ ಲೆಕ್ಕಾಚಾರವನ್ನು ಕೆಎಸ್‍ಆರ್‍ಟಿಸಿ ಮತ್ತು ಸರ್ಕಾರ ಅಂತಿಮಗೊಳಿಸಿಲ್ಲ. ಪರಿಹಾರವನ್ನು ನಿರ್ಣಯಿಸಲು ಕ್ಲೈಮ್ಸ್ ಟ್ರಿಬ್ಯೂನಲ್‍ನ ಕೆಲಸ ಪ್ರಗತಿಯಲ್ಲಿದೆ. ಈ ಹಿನ್ನೆಲೆಯಲ್ಲಿ ಪರಿಷ್ಕರಣೆ ಅರ್ಜಿಯನ್ನು ಅಂಗೀಕರಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಹೇಳಿದೆ.