ವಾರಣಾಸಿ: ಉತ್ತರ ಪ್ರದೇಶದ ಅಯೋಧ್ಯೆ ರೈಲ್ವೆ ಜಂಕ್ಷನ್ ಅನ್ನು ಅಯೋಧ್ಯಾ ಧಾಮ್ ಜಂಕ್ಷನ್ ಎಂದು ಮರುನಾಮಕರಣ ಮಾಡಲಾಗಿದೆ.
ಈ ಬಗ್ಗೆ ಸ್ಥಳೀಯ ಸಂಸದ ಲಲ್ಲು ಸಿಂಗ್ ಬುಧವಾರ ಮಾಹಿತಿ ನೀಡಿದ್ದು, ಅಯೋಧ್ಯೆ ರೈಲ್ವೆ ಜಂಕ್ಷನ್ ಅನ್ನು ಅಯೋಧ್ಯಾ ಧಾಮ್ ಜಂಕ್ಷನ್ ಎಂದು ಮರುನಾಮಕರಣ ಮಾಡಲಾಗಿದೆ ಎಂದು ಹೇಳಿದ್ದಾರೆ.
ಈ ಬಗ್ಗೆ ಟ್ವಿಟರ್ ನಲ್ಲಿ ಮಾಹಿತಿ ನೀಡಿದ ಲಲ್ಲು ಸಿಂಗ್, "ಅಯೋಧ್ಯೆ ಜಂಕ್ಷನ್ ಅಯೋಧ್ಯಾ ಧಾಮ್ ಜಂಕ್ಷನ್ ಆಗಿದೆ. ಪ್ರಧಾನಿ ಮೋದಿಯವರ ಮಾರ್ಗದರ್ಶನದಲ್ಲಿ ಸಾರ್ವಜನಿಕ ಭಾವನೆಗಳಿಗೆ ಗೌರವ ನೀಡಿ ಮರುನಾಮಕರಣ ಮಾಡಲಾಗಿದೆ ಎಂದು ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಅವರಿಂದ ಪುನರಾಭಿವೃದ್ಧಿ ರೈಲು ನಿಲ್ದಾಣವನ್ನು ಉದ್ಘಾಟಿಸುವ ಕೆಲವು ದಿನಗಳ ಮೊದಲು ಈ ಘೋಷಣೆ ಬಂದಿದ್ದು, ಡಿಸೆಂಬರ್ 30 ರಂದು ದೇವಸ್ಥಾನದ ಪಟ್ಟಣದಲ್ಲಿ ಪುನರಾಭಿವೃದ್ಧಿಗೊಂಡ ನಿಲ್ದಾಣ ಮತ್ತು ಹೊಸದಾಗಿ ನಿರ್ಮಿಸಲಾದ ವಿಮಾನ ನಿಲ್ದಾಣವನ್ನು ಮೋದಿ ಉದ್ಘಾಟಿಸಲಿದ್ದಾರೆ.
ಜನವರಿ 22 ರಂದು ರಾಮ ಮಂದಿರದಲ್ಲಿ ಮಹಾಮಸ್ತಕಾಭಿಷೇಕ ಸಮಾರಂಭವು ಪ್ರಧಾನಿ ಮೋದಿ ಅವರ ಸಮ್ಮುಖದಲ್ಲಿ ನಡೆಯಲಿದೆ.