ಇಡುಕ್ಕಿ: ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಇಡುಕ್ಕಿಯ ಮುಲ್ಲಪೆರಿಯಾರ್ ಜಲಾಶಯದ ನೀರಿನ ಮಟ್ಟ ಅಪಾಯದ ಹಂತಕ್ಕೆ ತಲುಪಿದೆ. ಈ ಹಿನ್ನೆಲೆಯಲ್ಲಿ 1 ಸಾವಿರ ಕ್ಯೂಸೆಕ್ ನೀರನ್ನು ಹೊರಬಿಡಲು ಅಧಿಕಾರಿಗಳು ಮುಂದಾಗಿದ್ದಾರೆ.
ಇಡುಕ್ಕಿ: ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಇಡುಕ್ಕಿಯ ಮುಲ್ಲಪೆರಿಯಾರ್ ಜಲಾಶಯದ ನೀರಿನ ಮಟ್ಟ ಅಪಾಯದ ಹಂತಕ್ಕೆ ತಲುಪಿದೆ. ಈ ಹಿನ್ನೆಲೆಯಲ್ಲಿ 1 ಸಾವಿರ ಕ್ಯೂಸೆಕ್ ನೀರನ್ನು ಹೊರಬಿಡಲು ಅಧಿಕಾರಿಗಳು ಮುಂದಾಗಿದ್ದಾರೆ.
125 ವರ್ಷಗಳ ಹಳೆಯದಾದ ಈ ಜಲಾಶಯದ ಒಟ್ಟು ಸಾಮರ್ಥ್ಯ 142 ಅಡಿ ಮಾತ್ರ.
ಇಡುಕ್ಕಿ ವಿಪತ್ತು ನಿರ್ವಹಣಾ ಅಧಿಕಾರಿಗಳು, ಜಿಲ್ಲಾಧಿಕಾರಿ ಶೀಬಾ ಜಾರ್ಜ್ ಅವರೊಂದಿಗೆ ಚರ್ಚೆ ನಡೆಸಿ ಈ ನಿರ್ಧಾರ ಕೈಗೊಂಡಿದ್ದಾರೆ. ಜಲಾಶಯದಿಂದ ನೀರನ್ನು ಹೊರಬಿಡುತ್ತಿರುವ ಕಾರಣ ನದಿಪಾತ್ರದ ಜನರಿಗೆ ಎಚ್ಚರಿಕೆಯಿಂದ ಇರಲು ಸೂಚನೆ ನೀಡಲಾಗಿದೆ.
ಕಳೆದ ಕೆಲವು ದಿನಗಳಿಂದ ಕೇರಳ, ತಮಿಳುನಾಡಿನಾದ್ಯಂತ ಭಾರಿ ಮಳೆಯಾಗುತ್ತಿದೆ. ಭಾನುವಾರ ಭಾರತೀಯ ಹವಾಮಾನ ಇಲಾಖೆ ಕೇರಳದಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಿತ್ತು.