ಜೈಪುರ: ರಾಷ್ಟ್ರೀಯ ರಜಪೂತ ಕರ್ಣಿ ಸೇನೆಯ ಅಧ್ಯಕ್ಷ ಸುಖದೇವ್ ಸಿಂಗ್ ಗೊಗಮೆಡಿ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಜೈಪುರ: ರಾಷ್ಟ್ರೀಯ ರಜಪೂತ ಕರ್ಣಿ ಸೇನೆಯ ಅಧ್ಯಕ್ಷ ಸುಖದೇವ್ ಸಿಂಗ್ ಗೊಗಮೆಡಿ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಂದು(ಮಂಗಳವಾರ) ಮಧ್ಯಾಹ್ನ ಶ್ಯಾಮ್ ನಗರ ಪ್ರದೇಶದಲ್ಲಿ ಈ ಘಟನೆ ನಡೆದಿದೆ.
'ಗೊಗಮೆಡಿ ಅವರನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಷ್ಟರಲ್ಲಿ ಅವರು ಮೃತಪಟ್ಟಿದ್ದಾಗಿ ವೈದ್ಯರು ತಿಳಿಸಿದ್ದಾರೆ' ಎಂದು ಜೈಪುರ ಪೊಲೀಸ್ ಆಯುಕ್ತ ಬಿಜು ಜಾರ್ಜ್ ಜೋಸೆಫ್ ಪಿಟಿಐಗೆ ತಿಳಿಸಿದ್ದಾರೆ.