ನವದೆಹಲಿ: ದುಬೈನಲ್ಲಿ ನಡೆಯುತ್ತಿರುವ ವಿಶ್ವಸಂಸ್ಥೆಯ ಕಾನ್ಫರೆನ್ಸ್ ಆಫ್ ಪಾರ್ಟೀಸ್ (ಸಿಒಪಿ-28)ರ ವಿಶ್ವ ಹವಾಮಾನ ಕ್ರಿಯಾ ಶೃಂಗಸಭೆಯ ವೇಳೆ ಕತಾರ್ ದೊರೆ ಅಮೀರ್ ಶೇಖ್ ತಮೀಮ್ ಬಿನ್ ಹಮದ್ ಅಲ್ ಥಾನಿ ಅವರನ್ನು ಶುಕ್ರವಾರ ಭೇಟಿಯಾಗಿ ಪ್ರಧಾನಿ ನರೇಂದ್ರ ಮೋದಿ ಮಾತುಕತೆ ನಡೆಸಿದ್ದಾರೆ.

ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಕತಾರ್ ದೊರೆ ಅವರೊಂದಿಗಿನ ಚಿತ್ರವನ್ನು ಪ್ರಧಾನಿ ಮೋದಿ ಹಂಚಿಕೊಂಡಿದ್ದಾರೆ.
ದ್ವಿಪಕ್ಷೀಯ ಪಾಲುದಾರಿಕೆಯ ಸಾಧ್ಯತೆ ಮತ್ತು ಕತಾರ್‌ನಲ್ಲಿರುವ ಭಾರತೀಯರ ಯೋಗಕ್ಷೇಮದ ಕುರಿತು ಸಕಾರಾತ್ಮಕ ಚರ್ಚೆ ನಡೆಸಿರುವುದಾಗಿ ಮೋದಿ ತಿಳಿಸಿದ್ದಾರೆ.
ಸಿಒಪಿ-28 ಶೃಂಗಸಭೆಯ ವೇಳೆ ಪ್ರಧಾನಿ ಮೋದಿ ಅವರು ಜಾಗತಿಕ ನಾಯಕರೊಂದಿಗೆ ಸಭೆ ನಡೆಸಿದ್ದರು.
ಇತ್ತೀಚೆಗಷ್ಟೇ ಭಾರತೀಯ ನೌಕಾಪಡೆಯ ಎಂಟು ಮಂದಿ ಮಾಜಿ ಸಿಬ್ಬಂದಿಗೆ ಕತಾರ್‌ನ ನ್ಯಾಯಾಲಯವೊಂದು ಮರಣದಂಡನೆ ವಿಧಿಸಿತ್ತು. ಇದಕ್ಕೆ ಭಾರತ ಆಘಾತ ವ್ಯಕ್ತಪಡಿಸಿತ್ತು.