ನವದೆಹಲಿ: ದೇಶದಾದ್ಯಂತ ಶುಕ್ರವಾರ ಬೆಳಿಗ್ಗೆ ಕೊನೆಗೊಂಡ 24 ಗಂಟೆಗಳಲ್ಲಿ ಹೊಸದಾಗಿ 640 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಒಬ್ಬರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.
ನವದೆಹಲಿ: ದೇಶದಾದ್ಯಂತ ಶುಕ್ರವಾರ ಬೆಳಿಗ್ಗೆ ಕೊನೆಗೊಂಡ 24 ಗಂಟೆಗಳಲ್ಲಿ ಹೊಸದಾಗಿ 640 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಒಬ್ಬರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.
ಸಕ್ರಿಯ ಪ್ರಕರಣಗಳ ಸಂಖ್ಯೆ 2,997ಕ್ಕೆ ಏರಿಕೆಯಾಗಿದೆ.
ಈವರೆಗೆ 5,33,328 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಪ್ರಸ್ತುತ ಕೋವಿಡ್ ಮರಣ ಪ್ರಮಾಣ ಶೇ 1.19ರಷ್ಟಿದೆ.
ದೇಶದಲ್ಲಿ ಇದುವರೆಗೆ 4.50 ಕೋಟಿ ಮಂದಿಗೆ (4,50,07,212) ಕೊರೊನಾ ಸೋಂಕು ತಗುಲಿದೆ.
ಈವರೆಗೆ ಒಟ್ಟು 4,44,70,887 ಮಂದಿ ಗುಣಮುಖರಾಗಿದ್ದಾರೆ.
ರಾಷ್ಟ್ರೀಯ ಕೋವಿಡ್ ಚೇತರಿಕೆ ಪ್ರಮಾಣ ಶೇ 98.81 ಆಗಿದೆ.ದೇಶದಲ್ಲಿ ಈವರೆಗೆ 220.67 ಕೋಟಿ ಕೋವಿಡ್ ಲಸಿಕೆ ಡೋಸ್ ವಿತರಿಸಲಾಗಿದೆ.