ನವದೆಹಲಿ: ದೇಶದಲ್ಲಿ ಮಂಗಳವಾರ ಹೊಸದಾಗಿ 412 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 4,170ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ನವದೆಹಲಿ: ದೇಶದಲ್ಲಿ ಮಂಗಳವಾರ ಹೊಸದಾಗಿ 412 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 4,170ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಇದರೊಂದಿಗೆ ದೇಶದಲ್ಲಿ ಪತ್ತೆಯಾದ ಒಟ್ಟು ಪ್ರಕರಣಗಳ ಸಂಖ್ಯೆ 4.50 ಕೋಟಿಯಾಗಿದ್ದು, 4.44 ಕೋಟಿ ಜನರು ಚೇತರಿಸಿಕೊಂಡಿದ್ದಾರೆ.
ಈವರೆಗೆ ದೇಶದಾದ್ಯಂತ 220.76 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ.
ಜೆಎನ್.1 ಸೋಂಕಿತರ ಸಂಖ್ಯೆ 69ಕ್ಕೆ ಏರಿಕೆ: ಮತ್ತೆ ಆರು ಜನರಲ್ಲಿ ಕೋವಿಡ್ ವೈರಾಣುವಿನ ಹೊಸ ಉಪ ತಳಿ ಜೆಎನ್.1 ಸೋಂಕು ಕಾಣಿಸಿಕೊಂಡಿದೆ. ಇದರೊಂದಿಗೆ ಜೆಎನ್.1 ಸೋಂಕಿತರ ಸಂಖ್ಯೆ 69ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸೋಂಕಿತರ ಪೈಕಿ ಬಹುತೇಕರು ಮನೆಯಲ್ಲಿ ಪ್ರತ್ಯೇಕವಾಗಿ ವಾಸವಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಗೆ ದಾಖಲಾಗುವವರ ಪ್ರಮಾಣ ಏರಿಕೆಯಾಗಿಲ್ಲ ಎಂದಿದ್ದಾರೆ.
'ಸೋಂಕು ಅಪಾಯಕಾರಿಯಾಗಿ ಉಲ್ಬಣಗೊಳ್ಳದಿದ್ದರೂ ರಾಜ್ಯಗಳು ಪರೀಕ್ಷೆ ಹೆಚ್ಚಿಸುವ ಮತ್ತು ಕಣ್ಗಾವಲು ವ್ಯವಸ್ಥೆಯನ್ನು ಚುರುಕುಗೊಳಿಸಬೇಕಾದ ಅಗತ್ಯವಿದೆ' ಎಂದು ನೀತಿ ಆಯೋಗದ ಸದಸ್ಯ ಡಾ.ವಿ.ಕೆ.ಪೌಲ್ ಹೇಳಿದ್ದಾರೆ.