ನವದೆಹಲಿ: ಡೀಪ್‌ಫೇಕ್ ಮತ್ತು ಕೃತಕ ಬುದ್ಧಿಮತ್ತೆ ಆಧಾರಿತ ತಪ್ಪುಮಾಹಿತಿಗಳ ಪ್ರಸರಣ ಕುರಿತು ಕಳವಳ ವ್ಯಕ್ತಪಡಿಸಿರುವ ಸರ್ಕಾರ, ಐ.ಟಿ ನಿಯಮಗಳಿಗೆ ಬದ್ಧರಾಗಿರಬೇಕು ಎಂದು ಸಾಮಾಜಿಕ ಮಾಧ್ಯಮಗಳಿಗೆ ಸೂಚನೆ ನೀಡಿದೆ.
ನವದೆಹಲಿ: ಡೀಪ್‌ಫೇಕ್ ಮತ್ತು ಕೃತಕ ಬುದ್ಧಿಮತ್ತೆ ಆಧಾರಿತ ತಪ್ಪುಮಾಹಿತಿಗಳ ಪ್ರಸರಣ ಕುರಿತು ಕಳವಳ ವ್ಯಕ್ತಪಡಿಸಿರುವ ಸರ್ಕಾರ, ಐ.ಟಿ ನಿಯಮಗಳಿಗೆ ಬದ್ಧರಾಗಿರಬೇಕು ಎಂದು ಸಾಮಾಜಿಕ ಮಾಧ್ಯಮಗಳಿಗೆ ಸೂಚನೆ ನೀಡಿದೆ.
ಡಿಜಿಟಲ್ ಮತ್ತು ಸಾಮಾಜಿಕ ಮಾಧ್ಯಮ ವೇದಿಕೆಗಳು ತನ್ನ ಬಳಕೆದಾರರಿಗೆ, ನಿರ್ದಿಷ್ಟ ಮಾಹಿತಿಯು ಐ.ಟಿ ನಿಯಮಗಳ ಅನುಸಾರ ನಿಷೇಧಿಸಿರುವ ಅಡಕಗಳನ್ನು ಒಳಗೊಂಡಿದೆ ಎಂದು ಸ್ಪಷ್ಟವಾಗಿ ತಿಳಿಸಬೇಕು ಎಂದು ತಿಳಿಸಿದೆ.
ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು, ಪ್ರಸ್ತುತ ಚಾಲ್ತಿಯಲ್ಲಿರುವ ಐ.ಟಿ ನಿಯಮಗಳಿಗೆ ಬದ್ಧರಾಗಿರಬೇಕು ಎಂದು ಡಿಜಿಟಲ್ ಮತ್ತು ಸಾಮಾಜಿಕ ಮಾಧ್ಯಮ ವೇದಿಕೆಗಳಗೆ ಸೂಚನೆ ನೀಡಿದೆ.
ಕೃತಕ ಬುದ್ಧಿಮತ್ತೆ (ಎ.ಐ) ಮತ್ತು ಡೀಪ್‌ಫೇಕ್ ತಂತ್ರಜ್ಞಾನದ ದುರ್ಬಳಕೆ ತಡೆಯುವುದರ ಕುರಿತಂತೆ ಈ ಮಾರ್ಗದರ್ಶಿ ಸೂಚನೆಗಳಲ್ಲಿ ಸರ್ಕಾರ ಹೆಚ್ಚಿನ ಒತ್ತು ನೀಡಿದೆ.
ಮಾಹಿತಿ ತಂತ್ರಜ್ಞಾನ ಖಾತೆ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಅವರು ಇತ್ತೀಚೆಗೆ ವಿವಿಧ ಜಾಲತಾಣಗಳ ಆಡಳಿತ ಪ್ರತಿನಿಧಿಗಳ ಜೊತೆಗೆ ಚರ್ಚಿಸಿದ್ದರು. ಅದರ ಹಿಂದೆಯೇ ಈ ನಿಯಮಗಳನ್ನು ಹೊರಡಿಸಲಾಗಿದೆ.
ನಿಯಮ ಉಲ್ಲಂಘನೆ ಸಂದರ್ಭದಲ್ಲಿ ಐಪಿಸಿ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆ 2000ರ ಅನ್ವಯ ವಿಧಿಸಬಹುದಾದ ಶಿಕ್ಷೆ, ದಂಡ ಕುರಿತಂತೆಯೂ ಸಾಮಾಜಿಕ ಮಾಧ್ಯಮಗಳು ಬಳಕೆದಾರರಿಗೆ ಮಾಹಿತಿ ನೀಡಬೇಕು ಎಂದು ಸೂಚಿಸಲಾಗಿದೆ.
ಪ್ರಮುಖ ನಟರನ್ನು ಗುರಿಯಾಗಿಸಿದ್ದ 'ಡೀಪ್‌ಫೇಕ್' ವೀಡಿಯೊಗಳು ಇತ್ತೀಚಿಗೆ ಜಾಲತಾಣದಲ್ಲಿ ಸಾಕಷ್ಟು ಹಂಚಿಕೆಯಾಗಿದ್ದವು. ತಂತ್ರಜ್ಞಾನದ ದುರ್ಬಳಕೆ ಕುರಿತಂತೆ ಇದು ಸಾರ್ವಜನಿಕವಾಗಿ ಆಕ್ರೋಶಕ್ಕೂ ಗುರಿಯಾಗಿತ್ತು.