HEALTH TIPS

Gyanvapi Survey: ASI ನಿಂದ ಮಸೀದಿ ಸರ್ವೆ ವರದಿ ಸಲ್ಲಿಕೆ, ಹಿಂದೂಪರ ವಕೀಲರಿಂದ ತಕರಾರು

               ವಾರಣಾಸಿ: ಜ್ಞಾನವಾಪಿ ಮಸೀದಿ ಸಮೀಕ್ಷೆ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿರುವ ಭಾರತೀಯ ಪುರಾತತ್ವ ಇಲಾಖೆ ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲಂಘಿಸಿದೆ ಎಂದು ಹಿಂದೂಪರ ವಕೀಲರು ಆರೋಪಿಸಿದ್ದಾರೆ.

             ವಾರಾಣಸಿಯ ವಿವಾದಿತ ಜ್ಞಾನವಾಪಿ ಮಸೀದಿ ಸಮೀಕ್ಷೆ (Gyanvapi Mosque Survey) ವರದಿಯನ್ನು ಉತ್ತರ ಪ್ರದೇಶದ ವಾರಾಣಸಿಯ ಜಿಲ್ಲಾ ನ್ಯಾಯಾಲಯಕ್ಕೆ ಸೋಮವಾರ ಸಲ್ಲಿಸಲಾಗಿದ್ದು, ಸಂಪೂರ್ಣವಾಗಿ ಸೀಲ್ ಮಾಡಿದ (ಮುಚ್ಚಿದ ಲಕೋಟೆ) ದಾಖಲೆಯನ್ನು ಭಾರತೀಯ ಪುರಾತತ್ವ ಇಲಾಖೆಯು (Archaeological Survey of India) ನ್ಯಾಯಾಲಯಕ್ಕೆ ಸಲ್ಲಿಸಿದೆ. 


           ಇದೀಗ ಹಿಂದೂಪರ ವಕೀಲರು ಇದೇ ಸರ್ವೇ ವರದಿ ಸಲ್ಲಿಕೆ ಬಳಿಕ ಭಾರತೀಯ ಪುರಾತತ್ವ ಇಲಾಖೆ ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲಂಘಿಸಿದೆ ಎಂದು ಆರೋಪಿಸಿದೆ. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಪ್ರಕರಣದಲ್ಲಿ ಹಿಂದೂ ಪರ ವಕೀಲ ವಿಷ್ಣು ಶಂಕರ್ ಜೈನ್ ಅವರು, "ಇಂದು, ಭಾರತೀಯ ಪುರಾತತ್ವ ಇಲಾಖೆಯು ತನ್ನ ವರದಿಯನ್ನು ಮುಚ್ಚಿದ ಕವರ್‌ನಲ್ಲಿ ವರದಿ ಸಲ್ಲಿಸಿದೆ. ಆ ಮೂಲಕ ಆಗಸ್ಟ್ 4 ರ ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲಂಘಿಸಿ ವರದಿ ಸಲ್ಲಿಸಿದೆ ಎಂದು ಹೇಳಿದರು.

              ಅಂತೆಯೇ ಪುರಾತತ್ವ ಇಲಾಖೆ ತನ್ನ ವರದಿಯ ಪ್ರತಿಯನ್ನು ನಮಗೆ ನೀಡಬೇಕು ಎಂದು ಜಿಲ್ಲಾ ನ್ಯಾಯಾಲಯದ ಮುಂದೆ ಅರ್ಜಿ ಸಲ್ಲಿಸಿದ್ದು, ಡಿಸೆಂಬರ್ 21 ರಂದು ಮುಂದಿನ ವಿಚಾರಣೆ ನಡೆಯಲಿದೆ. ಜಿಲ್ಲಾ ಜಿಲ್ಲಾ ನ್ಯಾಯಾಲಯವು ಕಾನೂನಿಗೆ ಅನುಗುಣವಾಗಿ ಆದೇಶವನ್ನು ನೀಡದಿದ್ದರೆ, ನಾವು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುತ್ತೇವೆ. ಮುಚ್ಚಿದ ಕವರ್‌ನಲ್ಲಿ ವರದಿಯನ್ನು ಸಲ್ಲಿಸಲು ಸಾಧ್ಯವಿಲ್ಲ, ಎಎಸ್‌ಐ ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲಂಘಿಸಿದೆ. ನಾವು ನ್ಯಾಯಾಲಯದ ಮುಂದೆ ನಮ್ಮ ಅರ್ಜಿಯನ್ನು ಸಲ್ಲಿಸಿದ್ದೇವೆ. ಎಎಸ್‌ಐ ವರದಿಯ ಪ್ರತಿಯನ್ನು ಸಾರ್ವಜನಿಕ ಡೊಮೇನ್‌ನಲ್ಲಿ ಲಭ್ಯವಾಗುವಂತೆ ಮಾಡಬೇಕು ಮತ್ತು ಈ ವಿಷಯವನ್ನು ಡಿಸೆಂಬರ್ 21 ರಂದು ವಿಚಾರಣೆಯ ಸಮಯದಲ್ಲಿ ಪ್ರಸ್ತಾಪಿಸಲಾಗುವುದು ಎಂದು ವಕೀಲ ಜೈನ್ ಹೇಳಿದರು.

                 ಜ್ಞಾನವಾಪಿ ಪ್ರಕರಣದ ಎಎಸ್‌ಐ ವರದಿ ಕುರಿತು ಎಎಸ್‌ಐ ಹೆಚ್ಚುವರಿ ಸ್ಥಾಯಿ ವಕೀಲ ರಾಹುಲ್ ಮಿಶ್ರಾ ಅವರು ಪ್ರತಿಕ್ರಿಯಿಸಿದ್ದು, “ನ್ಯಾಯಾಲಯವು ಎಲ್ಲಾ ಕಡೆಯವರ ವಾದ ಆಲಿಸಿದೆ, ಡಿಸೆಂಬರ್ 21 ರಂದು ನ್ಯಾಯಾಲಯವು ಸಮಗ್ರ ಆದೇಶವನ್ನು ನೀಡಲಿದೆ. ಎಲ್ಲಾ ವಿಷಯಗಳನ್ನು ಅಧ್ಯಯನ ಮಾಡಿದ ನಂತರ ಎಎಸ್‌ಐ ಸಮೀಕ್ಷಾ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ವರದಿ ಸಲ್ಲಿಸಿದೆ ಎಂದು ಹೇಳಿದರು.

                         ತಕರಾರು ಸಲ್ಲಿಸಿದ್ದ ಮಸೀದಿ ಆಡಳಿತ ಮಂಡಳಿ
           ನಂತರ ಜ್ಞಾನವಾಪಿ ಮಸೀದಿ ಸಮಿತಿಯು ಹೈಕೋರ್ಟ್‌ನ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ಗೆ (Supreme court) ಅರ್ಜಿ ಸಲ್ಲಿಸಿತ್ತು. 354 ವರ್ಷಗಳಷ್ಟು ಹಳೆಯದಾದ ಮಸೀದಿ ಸಂಕೀರ್ಣದ ನೆಲಮಾಳಿಗೆ ಮತ್ತು ಇತರ ಸ್ಥಳಗಳಲ್ಲಿ ಅನುಮತಿಯಿಲ್ಲದೆ ಎಎಸ್‌ಐ ಅಗೆಯುತ್ತಿದೆ, ಅದು ಕುಸಿಯುವ ಅಪಾಯದಲ್ಲಿದೆ ಎಂದು ಮಸೀದಿ ಆಡಳಿತ ಸಮಿತಿಯು ಆಕ್ಷೇಪಿಸಿ ಸುಪ್ರೀಂ ಕೋರ್ಟಿಗೆ ಹೋಗಿತ್ತು. ಆಗಸ್ಟ್ 4ರಂದು ಸುಪ್ರೀಂ ಕೋರ್ಟ್‌ ಸಮೀಕ್ಷೆಗೆ ತಡೆಯಾಜ್ಞೆ ನೀಡಲು ನಿರಾಕರಿಸಿತು.

                 ಆದರೆ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ನೇತೃತ್ವದ ಪೀಠವು, ಹೆಚ್ಚಿನ ಹಾನಿಕಾರಕ ಉತ್ಖನನಗಳನ್ನು ನಡೆಸದಂತೆ ಎಎಸ್‌ಐಗೆ ನಿರ್ದೇಶನ ನೀಡಿತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries