ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆ ಕುರಿತು ಚರ್ಚಿಸಲು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯು (ಸಿಡಬ್ಲ್ಯುಸಿ), ಡಿಸೆಂಬರ್ 21ರಂದು ಸಭೆ ಸೇರಲಿದೆ ಎಂದು ಮೂಲಗಳು ತಿಳಿಸಿವೆ.
ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆ ಕುರಿತು ಚರ್ಚಿಸಲು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯು (ಸಿಡಬ್ಲ್ಯುಸಿ), ಡಿಸೆಂಬರ್ 21ರಂದು ಸಭೆ ಸೇರಲಿದೆ ಎಂದು ಮೂಲಗಳು ತಿಳಿಸಿವೆ.
ರಾಷ್ಟ್ರರಾಜಧಾನಿ ದೆಹಲಿಯಲ್ಲಿ ವಿರೋಧ ಪಕ್ಷಗಳ ಇಂಡಿಯಾ ಮೈತ್ರಿಕೂಟದ ಸಭೆ ಡಿಸೆಂಬರ್ 19ರಂದು ನಡೆಯಲಿದೆ.
ಮುಂದಿನ ಲೋಕಸಭಾ ಚುನಾವಣೆ ಕುರಿತು ರೂಪಿಸಬೇಕಾದ ಕಾರ್ಯತಂತ್ರ, ಬಿಜೆಪಿ ವಿರುದ್ಧ ಪ್ರಮುಖ ಕಾರ್ಯಸೂಚಿ, ರ‍್ಯಾಲಿಗಳನ್ನು ಆಯೋಜಿಸುವ ಕುರಿತು ಈ ಸಭೆಯಲ್ಲಿ ಚರ್ಚಿಸಲಾಗುವುದು ಎನ್ನಲಾಗಿದೆ.
2024ರ ಸಾರ್ವತ್ರಿಕ ಚುನಾವಣೆಗೂ ಮುನ್ನ ಬೆಲೆ ಏರಿಕೆ ಹಾಗೂ ನಿರುದ್ಯೋಗ ವಿಷಯಗಳನ್ನು ಆಧಾರವಾಗಿಟ್ಟುಕೊಂಡು ರಾಹುಲ್ ಗಾಂಧಿ ಭಾರತ್ ಜೋಡೊ ಯಾತ್ರೆ ಹಮ್ಮಿಕೊಳ್ಳುವ ಸಾಧ್ಯತೆಯ ಬಗ್ಗೆಯು ಸಭೆಯಲ್ಲಿ ಚರ್ಚಿಸುವ ಸಾಧ್ಯತೆಯಿದೆ.
ಭಾರತ ಜೋಡೊ ಯಾತ್ರೆಯ ಯಶಸ್ಸಿನಿಂದ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿರುವ ಕಾಂಗ್ರೆಸ್, ಪೂರ್ವದಿಂದ ಪಶ್ಚಿಮಕ್ಕೆ ಪಾದಯಾತ್ರೆ ನಡೆಸಲು ಚಿಂತನೆ ನಡೆಸುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಶೀಘ್ರದಲ್ಲೇ ಅಂತಿಮ ನಿರ್ಧಾರ ಕೈಗೊಳ್ಳುವ ನಿರೀಕ್ಷೆಯಿದೆ.